ತುಮಕೂರು: ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ 13 ವರ್ಷದ ಮಗನಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ.
ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದ ವೃದ್ಧನ ಕುಟುಂಬದ 19 ಜನರ ವರದಿ ನೆಗಟಿವ್ ಬಂದಿದೆ. ಮಾರ್ಚ್ 25ರಿಂದ 13 ವರ್ಷದ ಬಾಲಕನನ್ನು ಕ್ವಾರೆಂಟೈನ್ ನಲ್ಲಿ ಇರಿಸಲಾಗಿತ್ತು. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಾಲಕನನ್ನು ಬೆಂಗಳೂರಿನ ಇಂದಿರಾ ಗಾಂಧಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಭಾನುವಾರ ಉಡುಪಿ ಜಿಲ್ಲೆಯಲ್ಲಿ ಎರಡು ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಒಟ್ಟು ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 84ಕ್ಕೆ ಏರಿಕೆಯಾಗಿದೆ. ನಂಜನಗೂಡಿನಲ್ಲಿ ಮತ್ತೆ ಹೊಸ ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದು, ಅಧಿಕೃತ ಪ್ರಕಟನೆ ಹೊರ ಬೀಳಬೇಕಿದೆ ಎಂದಿದ್ದಾರೆ.