ತುಮಕೂರು: ಉಕ್ರೇನ್ ಹಾಗೂ ರಷ್ಯಾ ಯುದ್ದ ಸಂಘರ್ಷ ವಿಶ್ವದಲ್ಲಿಯೇ ಭಾರಿ ಆತಂಕವನ್ನುಂಟು ಮಾಡಿದೆ. ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಸಲು ಮುಟ್ಟಿದೆ. ಹಲವು ಜಿಲ್ಲೆಯ ವಿದ್ಯಾರ್ಥಿಗಳು ಅಲ್ಲಿ ಸಿಲುಕಿಕೊಂಡು ತವರಿಗೆ ಬರಲಾರದೆ ಸ್ಥಿತಿ ನಿರ್ಮಾಣವಾಗಿದೆ. ಉಕ್ರೇನ್‍ನಲ್ಲಿ ಸಿಲುಕಿಕೊಂಡವರಲ್ಲಿ ತುಮಕೂರಿನ ಅಕ್ಕ, ತಮ್ಮ ಕೂಡ ಇದ್ದಾರೆ.
ರೂಪಶ್ರೀ ಹಾಗೂ ಸುಮಂತ್ ಇಬ್ಬರು ಒಡಹುಟ್ಟಿದವರಾಗಿದ್ದಾರೆ. ಇವರು ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಉಕ್ರೇನ್‍ನಲ್ಲಿ ವಿದ್ಯಾರ್ಥಿಗಳು ಸಿಲುಕಿಕೊಂಡಿರುವ ಹಿನ್ನೆಲೆಯಲ್ಲಿ, ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಭೇಟಿ ನೀಡಿ ವಿದ್ಯಾರ್ಥಿಗಳ ಪೋಷಕರಿಗೆ ಸಮಾಧಾನ ಹೇಳಿದ್ದಾರೆ. ಇದನ್ನೂ ಓದಿ: ವಿಶ್ವವೇ ನಮ್ಮೊಂದಿಗಿದೆ, ಜಯ ನಮ್ಮದೆ: ಉಕ್ರೇನ್ ಅಧ್ಯಕ್ಷ
Advertisement
Advertisement
ಕಂಬತ್ತನಹಳ್ಳಿ ನಿವಾಸಿ ಮಂಜುನಾಥ್ ಅವರ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದಲ್ಲದೆ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜೊತೆ ಮಾತನಾಡಿ ವಿದ್ಯಾರ್ಥಿಗಳನ್ನು ಕರೆತರುವ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಜ್ಯೋತಿ ಗಣೇಶ್ ಭರಸವೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಜ್ಯೋತಿ ಗಣೇಶ್, ಪೋಷಕರ ಜೊತೆ ಮಾತನಾಡಿದ್ದೇನೆ. ಮಕ್ಕಳ ಜೊತೆ ಪೋಷಕರು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. ನಾನೂ ಕೂಡ ಜಿಲ್ಲಾಡಳಿತ ಜೊತೆ ಮಾತನಾಡಿ ಸರ್ಕಾರದ ಗಮನ ಸೆಳೆದು ನಗರದ 7 ಮಂದಿ ಇದ್ದಾರೆ. ಜಿಲ್ಲೆಯ ಒಟ್ಟು 16 ಮಂದಿಯನ್ನು ಕರೆತರುವ ಪ್ರಯತ್ನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಉಕ್ರೇನ್ ಯುದ್ಧ ಭೀಕರತೆ ನಡುವೆಯೂ ಹಸೆಮಣೆ ಏರಿ ಜೋಡಿ ಸಂಭ್ರಮ