ತುಮಕೂರು: 2019ರಲ್ಲಿ ಇಡೀ ರಾಜ್ಯದ ಗಮನ ಸೆಳೆದಿದ್ದ ದಲಿತ ಮಹಿಳೆ (Dalit Woman) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆ 21 ಆರೋಪಿಗಳಿಗೆ ಇಂದು ನ್ಯಾಯಾಲಯ (Court) ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ.
ತುಮಕೂರಿನ (Tumakuru) 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಲಿದೆ. ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಆರೋಪಿಗಳು ಎಂದು ಕೋರ್ಟ್ ಆದೇಶಿಸಿದೆ. ಐಪಿಸಿ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ. ಇದನ್ನೂ ಓದಿ: ರೇಷನ್ ಕಾರ್ಡ್ ಗೊಂದಲಕ್ಕೆ ನಾನೇ ಹೊಣೆ, 7 ವಾರದೊಳಗೆ ಅದೇ ಐಡಿಯಲ್ಲಿ ಬಿಪಿಎಲ್ ಕಾರ್ಡ್ : ಮುನಿಯಪ್ಪ
ಚಿಕ್ಕನಾಯಕನಹಳ್ಳಿ (Chikkanayakana Halli) ತಾಲೂಕಿನ ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2019ರಲ್ಲಿ ಹೊನ್ನಮ್ಮ ಎಂಬ ದಲಿತ ಮಹಿಳೆಯ ಕೊಲೆ ನಡೆದಿತ್ತು. ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು. ಈ ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ಹೊನ್ನಮ್ಮ ದೂರು ನೀಡಿದ್ದರು. ಇದರಿಂದ ಗ್ರಾಮಸ್ಥರು ಹಾಗೂ ಹೊನ್ನಮ್ಮ ಮಧ್ಯೆ ದ್ವೇಷ ಉಂಟಾಗಿ ಜಗಳ ನಡೆಯುತ್ತಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಆರೋಪಿಗಳ ವಿರುದ್ಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಜಾತಿನಿಂದನೆ ಕೇಸ್ ದಾಖಲಾಗಿತ್ತು. ಇದನ್ನೂ ಓದಿ: ಗುತ್ತಿಗೆ ಪಡೆಯಲು ಭಾರತದಲ್ಲಿ 2,200 ಕೋಟಿ ಲಂಚ – ಅದಾನಿ ವಿರುದ್ಧ ಅಮೆರಿಕ ಕೋರ್ಟ್ ಅರೆಸ್ಟ್ ವಾರೆಂಟ್