DistrictsKarnatakaLatestMain PostTumakuru

ಸ್ವಾವಲಂಬಿ ಭಾರತ ನಿರ್ಮಾಣದಲ್ಲಿ ಭಾಗಿಯಾಗಿ: ರಾಜ್ಯಪಾಲ ಕರೆ

Advertisements

ತುಮಕೂರು: ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟಪ್ ಮತ್ತು ಸ್ಟ್ಯಾಂಡ್ ಅಪ್, ವೆಂಚರ್ ಕ್ಯಾಪಿಟಲ್ ಫಂಡ್ ಯೋಜನೆಗಳನ್ನು ಬಳಸಿಕೊಂಡು ನೀವು ಶ್ರೇಷ್ಠ ಭಾರತ, ನವ ಭಾರತ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಿ, ಉದ್ಯೋಗ ಸೃಷ್ಟಿಸುವಂತವರಾಗಿ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದರು.

ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸಭಾಂಗಣದಲ್ಲಿ ತುಮಕೂರು ವಿಶ್ವವಿದ್ಯಾಲಯದ 15ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ತುಮಕೂರು ವಿಶ್ವವಿದ್ಯಾನಿಲಯವು ನಮ್ಮ ರಾಜ್ಯದ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. ವಿಶ್ವವಿದ್ಯಾನಿಲಯವು ತನ್ನ ಪ್ರಾರಂಭದಿಂದಲೂ ಶಿಸ್ತಿನೊಂದಿಗೆ ತಂತ್ರಜ್ಞಾನ-ಶಕ್ತಗೊಂಡ ಶಿಕ್ಷಣವನ್ನು ಬಲಪಡಿಸುವ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಈ ವಿಶ್ವವಿದ್ಯಾನಿಲಯವು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಖ್ಯಾತಿಯನ್ನು ಗಳಿಸಿದೆ ಮತ್ತು ವಿವಿಧ ಚಟುವಟಿಕೆಗಳಲ್ಲಿ ಅನೇಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದೆ ಶ್ಲಾಘನೀಯ ಎಂದರು.

ದೇಶವು ಸ್ವಾತಂತ್ರ್ಯದ 75 ನೇ ವರ್ಷಾಚರಣೆಯನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಎಂದು ಆಚರಿಸುತ್ತಿದೆ. ಸ್ವಾತಂತ್ರ್ಯ ಚಳವಳಿಯ ಇತಿಹಾಸದಂತೆಯೇ 75 ವರ್ಷಗಳ ಪಯಣವು ಭಾರತೀಯರ ಕಠಿಣ ಪರಿಶ್ರಮ, ನಾವೀನ್ಯತೆ, ಉದ್ಯಮಶೀಲತೆಯ ಪ್ರತಿಬಿಂಬವಾಗಿದೆ. ಇಂದು ಭಾರತದ ಸ್ಟಾರ್ಟಪ್ ಪರಿಸರ ವ್ಯವಸ್ಥೆಯು ವಿಶ್ವದ ಆಕರ್ಷಣೆಯ ಕೇಂದ್ರವಾಗಿದೆ. ಭಾರತದ ಸಾಮಥ್ರ್ಯ ಮತ್ತು ಪ್ರತಿಭೆ ಪ್ರಪಂಚದ ಪ್ರತಿಯೊಂದು ಹಂತದಲ್ಲೂ ಪ್ರತಿಧ್ವನಿಸುತ್ತಿದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ-2020, 21 ನೇ ಶತಮಾನದ ಮೊದಲ ಶಿಕ್ಷಣ ನೀತಿಯಾಗಿದೆ, ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುತ್ತದೆ, ಇದು ಜಗತ್ತಿಗೆ ಹೊಸ ದಿಕ್ಕನ್ನು ನೀಡುವುದಲ್ಲದೆ ಇಡೀ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಕರ್ನಾಟಕದಲ್ಲಿ ಹೊಸ ಶಿಕ್ಷಣ ನೀತಿಯನ್ನು ಪರಿಚಯಿಸುವುದರೊಂದಿಗೆ, ಕ್ರೀಡೆಯನ್ನು ಸಹ ಪಠ್ಯಕ್ರಮದ ಭಾಗವಾಗಿ ಮಾಡಿರುವುದು ಪ್ರಶಸಂನೀಯ.

ಭಾರತದಲ್ಲಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸುವ ಸಲುವಾಗಿ ಅನೇಕ ಯೋಜನೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ರೂಪಿಸಿದೆ. ಇಂದಿನ ಯುವ ಪೀಳಿಗೆ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ದೇಶದ ಅಭಿವೃದ್ಧಿಯಲ್ಲಿ, ಶಾಂತಿ ಸಮಾಜ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಡಾ. ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ರಾಜ್ಯಪಾಲರು

ನವದೆಹಲಿಯ ಇಂದಿರಾಗಾಂಧೀ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯದ ವಿಶ್ರಾಂತ ಸಹ ಕುಲಪತಿ ಪ್ರೊ.ಸುಷ್ಮಾ ಯಾದವ್ ಅವರು ಮುಖ್ಯ ಅತಿಥಿಗಳ ಭಾಷಣ ಮಾಡಿದರು. ಕರ್ನಾಟಕದ ಪ್ರಖ್ಯಾತ ಕೊಳಲು ವಾದಕರಾದ ಪ್ರವೀಣ್ ಗೋಡ್ಕಿಂಡಿ, ಛತ್ತೀಸ್ ಗಢದ ಮಹಾತ್ಮ ಗಾಂಧಿ ಯೂನಿವರ್ಸಿಟಿ ಆಫ್ ಹಾರ್ಟಿಕಲ್ಚರ್ ಮತ್ತು ಫಾರೆಸ್ಟ್ರಿ ಡ್ರಗ್ ಇದರ ಕುಲಪತಿ ಡಾ.ರಾಮಶಂಕರ್ ಕುರೀಲ್ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯಿತು.

ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಕೇಶವ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Live Tv

Leave a Reply

Your email address will not be published.

Back to top button