ಹೇಮಾವತಿ ನೀರಿಗಾಗಿ ಹೋರಾಟಕ್ಕಿಳಿದ ಸಿದ್ದರಬೆಟ್ಟ ಶ್ರೀಗಳು

Public TV
1 Min Read
tmk protest

ತುಮಕೂರು: ಹೇಮಾವತಿ ನೀರಿಗಾಗಿ ಸಿದ್ದರಬೆಟ್ಟ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಬೈಕ್ ರ‍್ಯಾಲಿ ನಡೆಸುವ ಮೂಲಕ ಹೋರಾಟಕ್ಕೆ ಇಳಿದಿದ್ದಾರೆ. ಮಾಜಿ ಡಿಸಿಎಂ ಜಿ. ಪರಮೇಶ್ವರ ಅವರ ಸ್ವಕ್ಷೇತ್ರ ಕೊರಟಗೆರೆ ತಾಲೂಕಿನ ತೋವಿನಕೆರೆಯ ಸುತ್ತಮುತ್ತಲಿನ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ಬೃಹತ್ ಬೈಕ್  ರ‍್ಯಾಲಿ ನಡೆಸಿದರು.

ಸ್ವಾಮೀಜಿ ನೇತೃತ್ವದಲ್ಲಿ ತೋವಿನಕೆರೆಯಿಂದ ರ‍್ಯಾಲಿ ಹೊರಟ ನೂರಾರು ಪ್ರತಿಭಟನಾಕಾರರು ತುಮಕೂರಿನ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಬೈಕ್ ರ‍್ಯಾಲಿ ಅಂತ್ಯಗೊಳಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಕಳೆದ ಹತ್ತು- ಹದಿನೈದು ವರ್ಷದಿಂದಲೂ ಈ ಭಾಗದಲ್ಲಿ ಸರಿಯಾಗಿ ಮಳೆಯಾಗಿಲ್ಲ. ಹಾಗಾಗಿ ಕುಡಿಯುವ ನೀರಿಗೂ ತೀವ್ರ ಸಮಸ್ಯೆ ಉಂಟಾಗಿದೆ. ಜಾನುವಾರುಗಳಿಗೂ ಮೇವಿನ ತೊಂದರೆ ಆಗಿದೆ. ಹೀಗಾಗಿ ಸಮಸ್ಯೆಯನ್ನು ಪರಿಹಾರ ಮಾಡಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

tmk protest2

ಜಿಲ್ಲೆಯ ತಿಪಟೂರು, ತುರುವೇಕೆರೆ, ಗುಬ್ಬಿ, ಕುಣಿಗಲ್ ಸೇರಿದಂತೆ ಇತರೆ ತಾಲೂಕಿನ ಕೆರೆಗಳಿಗೆ ಹೇಮಾವತಿ ನೀರನ್ನು ಹರಿಸಲಾಗುತ್ತಿದೆ. ತೋವಿನಕೆರೆ ಸುತ್ತಮುತ್ತಲಿನ ಭಾಗಕ್ಕೆ ನೀರು ಬಿಟ್ಟಿಲ್ಲ. ಮಳೆಯೂ ಬಂದಿಲ್ಲ. ಕೂಡಲೇ ಹೇಮಾವತಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ಇಂದು ಮಾಡಿದ ಹೋರಾಟ ಸಾಂಕೇತಿಕವಾಗಿದ್ದು ನೀರು ಹರಿಸದೇ ಇದ್ದರೆ ಮುಂದಿನ ದಿನದಲ್ಲಿ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ಕೊಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *