ತುಮಕೂರು: ನೆರೆ ಪರಿಹಾರ ಪಡೆಯಲು ಸಂತ್ರಸ್ತರೆ ಮುಂದೆ ಬರುತ್ತಿಲ್ಲ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಸಚಿವರು, ನೆರೆಯಿಂದಾಗಿ ಬಿದ್ದಿರುವ ಮನೆಗಳ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿಗಳ ಖಾತೆಗೆ ಹಾಕಿದ್ದೇವೆ. ಸಂಪೂರ್ಣ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂ. ಹಾಗೂ ತಾತ್ಕಾಲಿಕವಾಗಿ ಮನೆ ಕಟ್ಟಿಕೊಳ್ಳುವವರಿಗೆ 50 ಸಾವಿರ ರೂ. ನೀಡಲಾಗುತ್ತದೆ. ಆದರೆ ಯಾರು ಕೂಡ ಮುಂದೆ ಅರ್ಜಿ ಸಲ್ಲಿಸುತ್ತಿಲ್ಲ ಎಂದರು. ಇದನ್ನೂ ಓದಿ: ಎತ್ತು ಏರಿಗೆ, ಕೋಣ ನೀರಿಗೆ: ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ಸಿಎಂ ಇಬ್ರಾಹಿಂ ಕಿಡಿ
Advertisement
Advertisement
ನೆರೆಗೆ 40 ರಿಂದ 50 ಸಾವಿರ ಮನೆಗಳು ಹಾನಿಯಾಗಿವೆ ಎನ್ನುವ ಮಾಹಿತಿ ಇದೆ. ಆದರೆ ಇಲ್ಲಿಯವರೆಗೂ ಜಿಲ್ಲಾಧಿಕಾರಿಗಳಿಗೆ 9 ಸಾವಿರ ಅರ್ಜಿಗಳು ಮಾತ್ರವೇ ಬಂದಿವೆ. ಸಂತ್ರಸ್ತರು ಪರಿಹಾರ ಪಡೆದು ಮನೆ ಕಟ್ಟಿಕೊಳ್ಳಲು ಮುಂದಾಗುತ್ತಿಲ್ಲ. ಸರ್ಕಾರ ಎಲ್ಲೂ ಫೇಲ್ ಆಗಿಲ್ಲ. ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ರಾಜ್ಯಕ್ಕೆ ಬರಲಿದೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ಕೇಂದ್ರದ ಪರಿಹಾರ ಬಕಾಸುರನ ಹೊಟ್ಟೆಗೆ ಮೂರು ಕಾಸಿನ ಮಜ್ಜಿಗೆ: ಸಿದ್ದರಾಮಯ್ಯ
Advertisement
ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (ಎನ್‌ಡಿಆರ್‌ಎಫ್) ಕರ್ನಾಟಕಕ್ಕೆ 1,200 ಕೋಟಿ ರೂ. ಮತ್ತು ಬಿಹಾರಕ್ಕೆ 400 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ. ಗುರುವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆ ನಡೆದಿತ್ತು. ಕ್ಯಾಬಿನೆಟ್ ಸಭೆಗೂ ಮುನ್ನ ಸಚಿವರಾದ ಪ್ರಹ್ಲಾದ್ ಜೋಷಿ ಮತ್ತು ಸದಾನಂದ ಗೌಡ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.
Advertisement
ನೆರೆ ಪರಿಹಾರ ವಿಳಂಬಕ್ಕಾಗಿ ಜನರು ಪ್ರಶ್ನೆ ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ವಿರೋಧ ಪಕ್ಷಗಳು ಈ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿವೆ. ಆದಷ್ಟು ಬೇಗ ಪರಿಹಾರ ನೀಡುವಂತೆ ಸಚಿವರು ಮನವಿ ಮಾಡಿದ್ದರು.