ಮನೆ ಕಟ್ಟಿಕೊಳ್ಳಲು ನಿವೇಶನ ಕೊಡಿಸಿ ಪ್ಲೀಸ್‌ – ರಾಷ್ಟ್ರಪತಿಗೆ ಪತ್ರ ಬರೆದ ವಿದ್ಯಾರ್ಥಿನಿ

Public TV
1 Min Read
tumakuru student droupadi murmu

ತುಮಕೂರು: ಮನೆ ಕಟ್ಟಿಕೊಳ್ಳಲು ನಿವೇಶನ ಕೊಡಿಸುವಂತೆ ರಾಷ್ಟ್ರಪತಿಗೆ (President Of India) ವಿದ್ಯಾರ್ಥಿನಿಯೊಬ್ಬಳು ಪತ್ರ ಬರೆದು ಮನವಿ ಮಾಡಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.

ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಹೋಬಳಿಯ ತೂಯಲಹಳ್ಳಿಯಲ್ಲಿ ವಿದ್ಯಾರ್ಥಿನಿ ಲಕ್ಷ್ಮಿ (11) ಮನೆ ಕಟ್ಟಿಕೊಳ್ಳಲು ನಿವೇಶನ ಇಲ್ಲದ ಕಾರಣ ರಾಷ್ಟ್ರಪತಿಗೆ ಪತ್ರ ಬರೆದು ಮನವಿ ಮಾಡಿರುವ ವಿಷಯ ತಿಳಿದು ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದನ್ನೂ ಓದಿ: ಜೈನ ಧರ್ಮ ಸಂಪ್ರದಾಯದಂತೆ ಜೈನಮುನಿ ಅಂತ್ಯಸಂಸ್ಕಾರ

tumakuru student

ತುಯಲಹಳ್ಳಿ ಗ್ರಾಮದ ನಿವಾಸಿ ನಾಗರಾಜು ಅವರ ಮಗಳು ತೂಯಲಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಾಳೆ. ಜೂನ್‌ 29ರಂದು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಆ ಪತ್ರ ರಾಜ್ಯ ಸರ್ಕಾರದ ಮೂಲಕ ತುಮಕೂರು ಜಿಲ್ಲಾಧಿಕಾರಿ ಕಚೇರಿ ತಲುಪಿತ್ತು. ಜಿಲ್ಲಾಧಿಕಾರಿ ಕಚೇರಿ ಆದೇಶದಂತೆ ತಹಶೀಲ್ದಾರ್ ತುರ್ತು ಭೇಟಿ ನೀಡಿ ಪರಿಶೀಲಿಸಿದರು.

ತಹಶೀಲ್ದಾರ್ ಕೂಡಲೇ ಗ್ರಾಮ ಲೆಕ್ಕಿಗರು ಹಾಗೂ ಪಿಡಿಒ ಅವರೊಂದಿಗೆ ಮಾತನಾಡಿ ಬಾಲಕಿಯವರ ಕುಟುಂಬ ಮನೆ ಕಟ್ಟಿಕೊಳ್ಳಲು ನಿವೇಶನ ಮುಂಜೂರು ಮಾಡಿಕೊಡಲು ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಸಿನಿಮಾ ಸ್ಟೈಲಲ್ಲಿ ಪಿಸ್ತೂಲ್ ತೋರಿಸಿ ಉದ್ಯಮಿಗೆ ಬೆದರಿಕೆ – 50 ಲಕ್ಷ ರೂ. ದರೋಡೆ

ಪತ್ರದಲ್ಲಿ ಏನಿದೆ?
ನಾನು, ತಂದೆ-ತಾಯಿ ಹಾಗೂ ಇಬ್ಬರು ಸಹೋದರಿಯರೊಂದಿಗೆ ಗುಡಿಸಲಿನಲ್ಲಿ ವಾಸವಿದ್ದೇವೆ. ನಾವು ವಾಸಿಸುತ್ತಿರುವ ಸ್ಥಳದಲ್ಲಿ ಮನೆ ಕಟ್ಟಿಕೊಳ್ಳಲು ನಮ್ಮ ಸಂಬಂಧಿಕರಿಂದಲೇ ತೊಂದರೆ ಇದೆ. ಇದೇ ಗುಡಿಸಲಿನಲ್ಲಿ ವಾಸಿಸದೆ ಬೇರೆ ದಾರಿಯಿಲ್ಲ. ಮಳೆಗಾಲದಲ್ಲಿ ನಮ್ಮ ಕುಟುಂಬದವರ ಕಷ್ಟ ಹೇಳತೀರದು. ಮನೆ ಕಟ್ಟಲು ಗ್ರಾಮ ಪಂಚಾಯಿತಿಯಿಂದ ಅನುದಾನ ಬಿಡುಗಡೆ ಮಾಡಿದರೂ ಮನೆ ಕಟ್ಟುವುದಕ್ಕೆ ಸಾಧ್ಯವಾಗುತ್ತಿಲ್ಲ. ದಯಮಾಡಿ ಮನೆ ಕಟ್ಟಿಕೊಳ್ಳಲು ನೀವು ನಿವೇಶನ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article