ತುಮಕೂರು: ಎಸ್‌ಐಆರ್ (SIR) ಪ್ರಕ್ರಿಯೆಗೆ ತೆರಳುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ಮೃತಪಟ್ಟ ಗ್ರಾಮ ಲೆಕ್ಕಾಧಿಕಾರಿ(Village Accountant) ಭುವನಾ ಅವರ ಪಾರ್ಥಿವ ಶರೀರ ನೆಲಮಂಗಲ ತಾಲೂಕಿನ ವರದನಾಯಕನಹಳ್ಳಿ ಗ್ರಾಮಕ್ಕೆ ತರಲಾಯಿತು.
ಮೃತದೇಹ ಆಗಮಿಸುತ್ತಿದ್ದಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಭುವನಾ ಅವರು ನೆಲಮಂಗಲ ತಾಲೂಕಿನ ವರದನಾಯಕನಹಳ್ಳಿ ಗ್ರಾಮದವರಾಗಿದ್ದು, ತಂದೆ ರಮೇಶ್ ಹಾಗೂ ತಾಯಿ ಸರೋಜಾ ಅವರ ಪುತ್ರಿಯಾಗಿದ್ದರು. ಅವರು ತುಮಕೂರು ಜಿಲ್ಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಭಾನುವಾರ (ಜುಲೈ 4) ಒಕ್ಕಲಿಗ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಕುಟುಂಬದ ತೋಟದಲ್ಲೇ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ.ಇದನ್ನೂ ಓದಿ: SIR ಪ್ರಕ್ರಿಯೆಗೆ ತೆರಳುತ್ತಿದ್ದಾಗ ಅಪಘಾತ – ಚಿಕಿತ್ಸೆ ಫಲಕಾರಿಯಾಗದೇ ವಿಎ ಸಾವು
ಭುವನಾ ಅವರು ಎಸ್‌ಐಆರ್ ಪ್ರಕ್ರಿಯೆಗಾಗಿ ತೆರಳುತ್ತಿದ್ದ ವೇಳೆ ತುಮಕೂರಿನ ಗೂಳೂರು ಬಳಿ ಅವರ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಇದನ್ನೂ ಓದಿ: SIR ಪ್ರಕ್ರಿಯೆಗೆ ತೆರಳುತ್ತಿದ್ದಾಗ ಅಪಘಾತ – ವಿಎ ಸಾವು ಬದುಕಿನ ನಡುವೆ ಹೋರಾಟ
