ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ.
ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
Advertisement
Advertisement
ಆಗಿದ್ದೇನು?:
ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ ಪೂಜೆ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಶಿರಾ ಮೂಲದ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಆದರೆ ನೀರಿನ ಕೊರತೆಯಿಂದಾಗಿ ತೊಟ್ಟಿಯ ನೀರು ಬಳಸಿ ಹರಿಸೇವೆ ಪ್ರಸಾದ ತಯಾರಿಸಿದ್ದಾರೆ.
Advertisement
ಕರಿಕಡಬು, ಪಲ್ಯ, ಬೆಳೆಕಾಳು ಸಾರು, ಚಿತ್ರಾನ್ನ ಸೇವಿಸಿದ ಬಳಿಕ 20ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕ ವೀರಭದ್ರ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಆತನನ್ನು ಬರಗೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಿದ್ದರಿಂದ ಬಾಲಕನನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿಯೇ ವೀರಭದ್ರ ಪ್ರಾಣ ಬಿಟ್ಟಿದ್ದಾನೆ.