ತುಮಕೂರು: ಇನ್ನೋವಾ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕುಣಿಗಲ್‍ನಲ್ಲಿ ನಡೆದಿದೆ.
ಸಾವನ್ನಪ್ಪಿದವರು ಆಂಧ್ರ ಮೂಲದವರಾಗಿದ್ದು ಬೆಂಗಳೂರಿನಲ್ಲಿ ನಲೆಸಿದ್ದ ಸೆಲ್ವಿ, ನಿರ್ಮಲ, ಕಾಳಿದಾಸ್, ವೀರಮ್ಮ, ಪಾಂಜಾಲಮ್ಮ ಮತ್ತು ಭವಾನಿ ಎಂದು ಗುರುತಿಸಲಾಗಿದೆ. ಮೃತರು ಧರ್ಮಸ್ಥಳ ಸೇರಿದಂತೆ ಪುಣ್ಯ ಕ್ಷೇತ್ರಗಳ ಪ್ರವಾಸಕ್ಕೆ ಹೋಗಿದ್ದರು ಎಂದು ತಿಳಿದು ಬಂದಿದೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಸಿದ್ಧಾಪುರದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಘಟನೆ ನಡೆದಿದ್ದು, ವೇಗವಾಗಿ ಬಂದ ಇನ್ನೋವಾ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜುಗುಜ್ಜಾಗಿದೆ. ಇಬ್ಬರು ಗಾಯಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಮೃತೂರು ಪೂಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.