ಮೈಲಿಗೆ ಮೌಢ್ಯಕ್ಕೆ ಮಗು ಸಾವು ಪ್ರಕರಣ – ಘಟನಾ ಸ್ಥಳಕ್ಕೆ ಜಡ್ಜ್ ಭೇಟಿ

Public TV
2 Min Read
Tumkur 1

ತುಮಕೂರು: ಹೆರಿಗೆ ನಂತರ ಬಾಣಂತಿ ಹಾಗೂ ಮಗುವನ್ನು ಊರ ಹೊರಗಿನ ಗುಡಿಸಲಿನಲ್ಲಿ ಇರಿಸಿ ಮಗು ಮೃತಪಟ್ಟ ಗೊಲ್ಲರಹಟ್ಟಿ (Gollara Hatti) ಗ್ರಾಮಕ್ಕೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು (Judge) ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ.ನೂರುನ್ನೀಸ ಇಂದು ದಿಢೀರ್ ಭೇಟಿ ನೀಡಿದ್ದಾರೆ. ಪರಿಶೀಲನೆ ನಡೆಸಿ ಬಳಿಕ ಗ್ರಾಮಸ್ಥರು ಹಾಗೂ ಸ್ಥಳೀಯ ಸರ್ಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೃತ ಮಗುವಿನ ಪೋಷಕರ ಆಹವಾಲು ಸ್ವೀಕರಿಸಿದ ನ್ಯಾಯಾಧೀಶರು, ಸಾರ್ವಜನಿಕರಿಂದ ಮಾಹಿತಿ ಕಲೆ ಹಾಕಿದರು. ಮಗು ಮೃತಪಟ್ಟ ನಂತರವೂ ಮೂರು ದಿನಗಳಿಂದ ಸುರಿಯುತ್ತಿರುವ ಜಡಿ ಮಳೆಯನ್ನು ಲೆಕ್ಕಿಸದೇ ತಾಯಿಯನ್ನು ಪುಟ್ಟ ಗುಡಿಸಿಲಿನಲ್ಲಿ ಇರಿಸಲಾಗಿದೆ. ಗ್ರಾಮಸ್ಥರಿಗೆ ಕಾನೂನುಗಳ ತಿಳುವಳಿಕೆ ನೀಡಿ, ಗುಡಿಸಲನ್ನು ಕೆಡವಿಸಿ, ಬಾಣಂತಿಯನ್ನು ಮನೆಗೆ ಕಳುಹಿಸಿದರು. ಸ್ಥಳೀಯ ವೈದ್ಯರಿಂದ ಮಹಿಳೆಯ ಆರೋಗ್ಯ ಪರಿಶೀಲನೆ ನಡೆಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಹಿಂದೆ ಸ್ಥಳೀಯ ಸರ್ಕಾರಿ ಅಧಿಕಾರಿಗಳು ಗುಡಿಸಲಿಗೆ ತೆರಳಿ ಬಾಣಂತಿ ಹಾಗೂ ಮಗುವನ್ನು ಮನೆಗೆ ಸೇರಿಸುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಿರಲಿಲ್ಲ. ಇದನ್ನೂ ಓದಿ: ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ವಿವಾದ – ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಬಳಿಕ ನ್ಯಾಯಮೂರ್ತಿಗಳು ಸುದ್ದಿಗಾರರೊಂದಿಗೆ ಮಾತನಾಡಿ, ಆರೋಗ್ಯದ ಹೆಚ್ಚಿನ ನಿಗಾ ಅವಶ್ಯಕತೆ ಇರುವ ಬಾಣಂತಿ ಮತ್ತು ಮಗುವನ್ನು ಊರಾಚೆಯ ಗುಡಿಸಲಿನಲ್ಲಿಯೇ ಇರಿಸಿದ ವಿಚಾರ ಇಡೀ ನಾಗರಿಕ ಸಮಾಜ ತಲೆತಗ್ಗಿಸುವ ಪ್ರಕರಣವಾಗಿದೆ. ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಮುಂದುವರೆದಿದೆ. ಆಚಾರಗಳಿಗಿಂತ ಪ್ರಾಣ ಮುಖ್ಯ ಎನ್ನುವುದನ್ನು ಯಾರೂ ಮರೆಯಬಾರದು. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ನಾಗರಿಕ ಹಕ್ಕುಗಳ ರಕ್ಷಣಾ ಕಾಯಿದೆ 1955ರ ಅಡಿ ತಪ್ಪಿಸ್ಥತರ ವಿರುದ್ಧ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ಈ ಬಗ್ಗೆ ಸಮಗ್ರ ವರದಿಯನ್ನು ಮಹಿಳೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಸಲ್ಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಬೆಳ್ಳಾವಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವಾರ್ಡ್‍ಗಳು, ಔಷಧಿ ಉಗ್ರಾಣ ಕೊಠಡಿ, ಶೌಚಾಲಯಕ್ಕೆ ಭೇಟಿ ನೀಡಿದ ಅವರು, ಆಸ್ಪತ್ರೆಯಲ್ಲಿ ನೈರ್ಮಲ್ಯ ಕಾಪಾಡಬೇಕು ಎಂದು ತಾಕೀತು ಮಾಡಿದರು.

ಈ ಸಂಧರ್ಭದಲ್ಲಿ ತಹಶೀಲ್ದಾರ್ ಸಿದ್ದೇಶ್, ಮಾನವ ಹಕ್ಕುಗಳ ಸೇವಾ ಕೇಂದ್ರದ ಅಧ್ಯಕ್ಷ ಸಿದ್ದಲಿಂಗೇಗೌಡ, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್ ಇಲಾಖೆಯ ಅಧಿಕಾರಿಗಳು, ಉಪಸ್ಥಿತರಿದ್ದರು. ಇದನ್ನೂ ಓದಿ: ಮಣಿಪುರ ಸಂಘರ್ಷ ಎಫೆಕ್ಟ್‌ – ಮೈತೇಯ್‌ ಸಮುದಾಯದ ಪತಿಯಿಂದ ಬೇರೆಯಾದ ಕುಕಿ ಮಹಿಳೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article