ತುಮಕೂರು: ತುಮಕೂರಿನ ಎರಡನೇ ವರ್ಷದ ದಸರಾ (Tumakuru Dasara) ವಿಜೃಂಭಣೆಯಿಂದ ನಡೆಯಿತು. ಅಂಬಾರಿ ಹೊತ್ತ ಆನೆ ಶ್ರೀರಾಮ ಶಾಂತತೆಯಿಂದ ಹೆಜ್ಜೆ ಹಾಕಿ ಎಲ್ಲರ ಕಣ್ಮನ ಸೆಳೆಯಿತು.
ಮಧ್ಯಾಹ್ನ 12 ಗಂಟೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ನಂದಿ ಧ್ವಜಕ್ಕೆ ಪೂಜೆ ನೆರವೇರಿಸುವ ಮೂಲಕ ದಸರಾ ಮೆರವಣಿಗೆಗೆ ಚಾಲನೆ ನೀಡಿದರು. ವಿವಿಧ ಕಲಾತಂಡಗಳು, 50ಕ್ಕೂ ಹೆಚ್ಚು ದೇವರುಗಳು, ಪೊಲೀಸ್ ಕುದುರೆ ಸವಾರಿ, ನಾಟಿ ಎತ್ತುಗಳ ಮೆರವಣಿಗೆಯು ನಗರದ ಬಿಜಿಎಸ್ (ಟೌನ್ ಹಾಲ್ ವೃತ್ತ) ವೃತ್ತದಿಂದ ಪ್ರಾರಂಭಗೊಂಡಿತು. ಇದನ್ನೂ ಓದಿ: 5 ವರ್ಷದ ಬಳಿಕ ಭಾರತ, ಚೀನಾ ಮಧ್ಯೆ ನೇರ ವಿಮಾನ ಸೇವೆ ಆರಂಭ
ಎರಡು ಲಕ್ಷ್ಮಿ ಆನೆಗಳ ಜೊತೆ ಅಂಬಾರಿ ಹೊತ್ತು ಬಂದ ಶ್ರೀರಾಮ ಆನೆಯ ಮೇಲೆ ನಾಡದೇವತೆಗೆ ಗೃಹ ಸಚಿವ ಪರಮೇಶ್ವರ್ ಪುಷ್ಪಾರ್ಚನೆ ಮಾಡುವ ಮೂಲಕ ಅಂಬಾರಿ ಮೆರವಣಿಗೆಗೆ ಚಾಲನೆ ನೀಡಿದರು. ಇದನ್ನೂ ಓದಿ: ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಶೇಂಗಾ ಖರೀದಿ: ನೋಂದಣಿ, ಖರೀದಿ ಏಕಕಾಲಕ್ಕೆ ಆರಂಭಿಸಲು ಶಿವಾನಂದ ಪಾಟೀಲ್ ಸೂಚನೆ
ಅಂಬಾರಿ ಮೆರವಣಿಗೆಯು ಬಿಜಿಎಸ್ ವೃತ್ತದಿಂದ ಕೋಟೆ ಆಂಜನೇಯ ಸ್ವಾಮಿ ಸರ್ಕಲ್‌ನಿಂದ ಕೋತಿತೋಪು, ಅಲ್ಲಿಂದ ಶ್ರೀ ಶಿವಕುಮಾರ ಸ್ವಾಮೀಜಿ ಸರ್ಕಲ್‌ನಿಂದ ನಗರದ ಹೈಸ್ಕೂಲ್ ಮೈದಾನವನ್ನು ತಲುಪಿತು. ಇದನ್ನೂ ಓದಿ: Anekal | ವಿಜೃಂಭಣೆಯಿಂದ ಜರುಗಿದ ಚೌಡೇಶ್ವರಿ ಜಂಬೂಸವಾರಿ – ಪುಳಕಿತರಾದ ಭಕ್ತ ಸಾಗರ