ತುಮಕೂರು: ಗುಬ್ಬಿ ತಾಲೂಕಿನ ತಿಪ್ಪೂರಿನ ಉಡುಸಲಮ್ಮ ದೇವಸ್ಥಾನದ ಅರ್ಚಕರಿಗೆ ಸೇರಿದ ತೋಟವನ್ನು ನಾಶಪಡಿಸಿದ್ದ ಹಿನ್ನೆಲೆಯಲ್ಲಿ ಇಂದು ಹಲವಾರು ಮುಖಂಡರು, ರೈತ ನಾಯಕರು ಸಂತ್ರಸ್ತ ಅರ್ಚಕರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಹೋಗಿ ಪರಿಶೀಲಿಸಿ ಬೆಳೆದು ನಿಂತಿದ್ದ ತೆಂಗಿನ ಮರವನ್ನು ಉರುಳಿಸಿದ್ದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಯುವ ಮುಖಂಡ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಪುತ್ರ ಆರ್.ರಾಜೇಂದ್ರ ಭೇಟಿ ಕೊಟ್ಟು ಸಾಂತ್ವಾನ ಹೇಳಿದ್ದಾರೆ. ಅಲ್ಲದೆ ತೋಟ ಕಳೆದುಕೊಂಡು ಕಂಗಾಲಾಗಿದ್ದ ರೈತ ಮಹಿಳೆ ಸಿದ್ದಮ್ಮಗೆ ಧನಸಹಾಯ ಮಾಡಿದ್ದಾರೆ. ಇದನ್ನೂ ಓದಿ: 30 ವರ್ಷಗಳಿಂದ ಬೆಳೆದು ನಿಂತಿದ್ದ ತೋಟ ನಾಶ ಮಾಡಿದ್ರಾ ತಹಶೀಲ್ದಾರ್?
Advertisement
Advertisement
ಬಳಿಕ ಮಾತನಾಡಿದ ರಾಜೇಂದ್ರ, ಕಾನೂನು ಗಾಳಿಗೆ ತೂರಿ ಮರಗಳನ್ನು ಉರುಳಿಸಿದ್ದ ಗ್ರಾಮ ಲೆಕ್ಕಾಧಿಕಾರಿ, ಕಂದಾಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ರೈತರಾಗಿದ್ದರೆ ಅವರ ಕಷ್ಟ ಏನು ಎಂದು ಗೊತ್ತಾಗೋದು. ವ್ಹೀಲ್ ಚೇರ್ ಮೇಲೆ ಕುಳಿತವರಿಗೆ ರೈತರ ಕಷ್ಟ ಎಲ್ಲಿ ಗೊತ್ತಾಗಬೇಕು. ಈ ಕೂಡಲೇ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.