ತುಮಕೂರು: ತಂದೆ ಹಾಗೂ ಮಗ ರೈಲಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಬಳಿಯ ಕ್ಯಾತಸಂದ್ರ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.
ಈ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು 30 ವರ್ಷದ ಯೋಗೇಶ್ ಹಾಗೂ ಅವರ 8 ವರ್ಷದ ಪುತ್ರ ಚಿರಂಜೀವಿ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ-ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
Advertisement
Advertisement
ಮೃತರು ಹಾಸನದ ವಲ್ಲಭಾಯಿ ನಗರದವರೆಂದು ಹೇಳಲಾಗುತ್ತಿದ್ದು, ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ ಎಂಬುದು ತಿಳಿದು ಬಂದಿಲ್ಲ. ಈ ಸಂಬಂಧ ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.