ತುಮಕೂರು: ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಜೋರು ಮಳೆಯಾಗಿದ್ದು, ಕೆರೆ, ಕಟ್ಟೆಗಳು ಭರ್ತಿಯಾಗಿವೆ. ಕೊರಟಗೆರೆ, ಮಧುಗಿರಿ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಸುಮಾರು 20 ವರ್ಷಗಳ ನಂತರ ಜಯಮಂಗಲಿ ನದಿ ತುಂಬಿ ಹರಿಯುತ್ತಿದೆ.
ನದಿ ಹರಿಯುವುದನ್ನು ನೋಡಲು ಜನರು ಸಾಗರೋಪಾದಿಯಲ್ಲಿ ಜಮಾಯಿಸುತ್ತಿದ್ದಾರೆ. ಮೊಬೈಲ್‌ಗಳಲ್ಲಿ ಫೋಟೊ ತೆಗೆದುಕೊಂಡು, ವಿಡಿಯೊ ಮಾಡಿಕೊಂಡು ಇತರರಿಗೆ ಹಂಚಿಕೊಂಡು ಸಂತಸ ವ್ಯಕ್ತಪಡಿಸುತ್ತಿದ್ದ ದೃಶ್ಯಗಳು ಕಂಡುಬಂದವು. ಇದನ್ನೂ ಓದಿ: ಒಂದು ಕೆನ್ನೆಗೆ ಹೊಡೆದಾಗ ಮತ್ತೊಂದು ಕೆನ್ನೆ ತೋರಿಸಿದರೆ ಸಿಗೋದು ಸ್ವಾತಂತ್ರ್ಯವಲ್ಲ, ಭಿಕ್ಷೆ: ಕಂಗನಾ
Advertisement
Advertisement
ಕಳೆದ ಕೆಲ ವರ್ಷಗಳಿಂದ ಒಣಗಿ ನಿಂತಿದ್ದ, ನೀರನ್ನೇ ಕಾಣದ ಕೆರೆಗಳಿಗೂ ಜೀವ ಕಳೆ ಬಂದಿದೆ. ಬಹುತೇಕ ಕೆರೆಗಳು ಭರ್ತಿಯಾಗಿದ್ದು, ಕೋಡಿ ಹರಿಯುತ್ತಿದೆ. ಕೆರೆ ಕೋಡಿಯಲ್ಲಿ ನೀರು ಹರಿಯುವುದನ್ನು ನೋಡಲು ಜನರು ಬರುತ್ತಿದ್ದಾರೆ. ಇದನ್ನೂ ಓದಿ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ತವರಿಗೆ ಬಂದು ನವವಿವಾಹಿತೆ ಆತ್ಮಹತ್ಯೆ!
Advertisement
ಸಾಮಾನ್ಯವಾಗಿ ಜಿಲ್ಲೆಯಲ್ಲಿ ಮುಂಗಾರು ಅಂತ್ಯದ ನಂತರ ಅಕ್ಟೋಬರ್ ತಿಂಗಳ ಕೊನೆವರೆಗೂ ಮಳೆಯಾಗುತ್ತದೆ. ಹೆಚ್ಚೆಂದರೆ ನವೆಂಬರ್ ತಿಂಗಳ ಆರಂಭದಲ್ಲಿ ಒಂದೆರಡು ಬಾರಿ ಸುರಿಯುತ್ತದೆ. ಆದರೆ ಈ ಸಲ ನವೆಂಬರ್ ಮಧ್ಯಭಾಗದಲ್ಲೂ ಮಳೆಯಾಗುತ್ತಿದೆ.