ತುಮಕೂರು: ಎರಡು ವಿಧನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿರುವ ಮಾಜಿ ಸಚಿವ ವಿ ಸೋಮಣ್ಣಗೆ (V Somanna) ತುಮಕೂರು (Tumkur) ಲೋಕಸಭಾ ಕ್ಷೇತ್ರದ ಬಿಜೆಪಿ (BJP) ಟಿಕೆಟ್ ನೀಡಲು ಚಿಂತಿಸಲಾಗಿದೆ ಎಂಬ ಗುಟ್ಟನ್ನು ಹಾಲಿ ಸಂಸದ ಜಿಎಸ್ ಬಸವರಾಜು (GS Basavaraj) ಬಿಚ್ಚಿಟ್ಟಿದ್ದಾರೆ.
Advertisement
ತುಮಕೂರು ನಗರದಲ್ಲಿ ನಡೆದ ವೀರಶೈವ ಸಮಾಜದ ಕಾರ್ಯಕ್ರಮವೊಂದರಲ್ಲಿ ಸಂಸದ ಬಸವರಾಜು ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ನನಗೆ ವಯಸ್ಸಾದ ಕಾರಣ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ. ಮುಂದಿನ ಚುನಾವಣೆಗೆ ನಮ್ಮ ಸಮುದಾಯದವರೇ ಆದ ವಿ ಸೋಮಣ್ಣಗೆ ಟಿಕೆಟ್ ಕೊಡುತ್ತಾರೆ. ದೆಹಲಿಗೆ ಹೋದಾಗ ನಾನು ಇದನ್ನು ಹೇಳಿದ್ದೇನೆ. ಹೀಗಾಗಿ ಸಮುದಾಯದ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು, ನಮ್ಮ ನಮ್ಮಲ್ಲಿ ಕಿತ್ತಾಟ ಮಾಡಿಕೊಂಡು ಬೇರೆಯವರಿಗೆ ಅನುಕೂಲ ಮಾಡಿಕೊಡಬಾರದು ಎಂದು ಸಮಾಜದ ಜನರಿಗೆ ಕಿವಿ ಮಾತು ಹೇಳಿದ್ದಾರೆ. ಇದನ್ನೂ ಓದಿ: ರೈಲ್ವೆ ಸಚಿವರು ದಣಿವರಿಯದಂತೆ ಕೆಲಸ ಮಾಡುತ್ತಿದ್ದು, ರಾಜೀನಾಮೆಗೆ ಆಗ್ರಹ ಸರಿಯಲ್ಲ: ಹೆಚ್‌ಡಿಡಿ
Advertisement
Advertisement
ಸಂಸದ ಜಿಎಸ್ ಬಸವರಾಜು ಅವರ ಈ ಮಾತು ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಲೋಕಸಭಾ ಟಿಕೆಟ್ ಬಯಸಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿದ್ದ ಮಾಜಿ ಸಂಸದ ಮುದ್ದಹನುಮೇಗೌಡ, ಲೋಕಸಭಾ ಕ್ಯಾಂಡಿಡೇಟ್ ಎಂದೇ ಬಿಂಬಿಸಿಕೊಂಡಿದ್ದ ಲೇಔಟ್ ಚಿದಾನಂದರಿಗೆ ಸಂಸದರ ಈ ಹೇಳಿಕೆ ನಿದ್ದೆಗೆಡಿಸಿದೆ. ಅದರ ಜೊತೆಗೆ ಮಾಜಿ ಸಚಿವ ಮಾಧುಸ್ವಾಮಿ ಅವರೂ ಲೋಕಸಭೆಗೆ ಸೂಕ್ತ ಎಂದು ಜಿಲ್ಲಾ ಬಿಜೆಪಿಯಲ್ಲಿ ಚರ್ಚೆ ಮಾಡಿದ್ದಾರೆ. ಈ ನಡುವೆ ಜಿಎಸ್ ಬಸವರಾಜು ಅವರ ಹೊಸ ದಾಳಿ ಗೊಂದಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಯಾರೇ ಮಾತಾಡಿದ್ರು ಜೈಲಿಗೆ ಹಾಕ್ತೀವಿ ಎನ್ನೋಕೆ ಇದು ತಾಲಿಬಾನ್ ಅಲ್ಲ: ಎಂಬಿಪಿ ವಿರುದ್ಧ ಯತ್ನಾಳ್ ಕಿಡಿ