ತುಮಕೂರು: ಮತದಾರರಿಗೆ ನಕಲಿ ಬಾಂಡ್ ಆಮಿಷ ಪ್ರಕರಣದ ಹಿನ್ನೆಲೆಯಲ್ಲಿ ಜೆಡಿಎಸ್ (JDS) ಶಾಸಕ ಡಿ.ಸಿ ಗೌರಿಶಂಕರ್ (DC Gourishankar) ಅವರನ್ನು ಹೈಕೋರ್ಟ್ ಅನರ್ಹಗೊಳಿಸಿ ಆದೇಶ ಪ್ರಕಟಿಸಿದೆ.
ಕಲಬುರಗಿ ಹೈಕೋರ್ಟ್‍ನ ಏಕಪೀಠ ಸದಸ್ಯತ್ವ ಈ ತೀರ್ಪನ್ನು ಹೊರಡಿಸಿದೆ. ತುಮಕೂರು (Tumakuru) ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ ವಿರುದ್ಧ ನಕಲಿ ಬಾಂಡ್ ಹಂಚಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. 32 ಸಾವಿರ ವಯಸ್ಕರು ಹಾಗೂ 16 ಸಾವಿರ ಮಕ್ಕಳಿಗೆ ನಕಲಿ ವಿಮಾ ಪಾಲಿಸಿ ಬಾಂಡ್ ವಿತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದನ್ನೂ ಓದಿ: ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ಅನರ್ಹ
Advertisement
Advertisement
ಅಷ್ಟೇ ಅಲ್ಲದೇ 2018ರ ಚುನಾವಣೆಯಲ್ಲಿ ನಕಲಿ ಬಾಂಡ್ ಆಮಿಷ ಒಡ್ಡಿ ಅಕ್ರಮವಾಗಿ ಗೆದ್ದಿದ್ದಾರೆ ಎಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ನೀಡಿದ್ದ ದೂರು ನೀಡಿದ್ದರು. ಗೌರಿಶಂಕರ್ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಸುರೇಶ್ ಗೌಡರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಸುದೀರ್ಘ 5 ವರ್ಷಗಳ ಕಾಲ ವಿಚಾರಣೆ ನಡೆಸಿರುವ ಹೈಕೋರ್ಟ್ ಇಂದು ತೀರ್ಪು ನೀಡಿದೆ. ಇದನ್ನೂ ಓದಿ: ಹಳೇ ಮೈಸೂರು ಭಾಗದಲ್ಲಿ ಪ್ರಾಬಲ್ಯ ಉಳಿಸಿಕೊಳ್ಳಲು ಜೆಡಿಎಸ್ ಸರ್ಕಸ್