ತುಮಕೂರು: ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಸಿದ್ದಗಂಗಾ ಮಠ ಹಾಗೂ ಸಿದ್ದಗಂಗಾ ವಿದ್ಯಾಸಂಸ್ಥೆ ವತಿಯಿಂದ 50 ಲಕ್ಷ ರೂ.ವನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡಲಾಗಿದೆ.
ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಇಂದು ಮಠದಿಂದ 25 ಲಕ್ಷ ರೂ. ಹಾಗೂ ವಿದ್ಯಾಸಂಸ್ಥೆಯಿಂದ 25ಲಕ್ಷ ರೂ. ಸೇರಿ ಒಟ್ಟು 50 ಲಕ್ಷ ರೂ.ಗಳ ಡಿಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಮೂಲಕ ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದರು.
Advertisement
Advertisement
ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್ ಕುಮಾರ್, ಸಿದ್ದಗಂಗಾ ಮಠದ ವಿಶ್ವನಾಥಯ್ಯ, ಟಿ.ಕೆ.ನಂಜುಂಡಪ್ಪ, ಮತ್ತಿತರರು ಹಾಜರಿದ್ದರು.
Advertisement
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋರಿರುವ ಆರ್ಥಿಕ ನೆರವಿಗೆ ಮೈಸೂರಿನ ಶ್ರೀ ಸುತ್ತೂರು ಮಠವು ಏಪ್ರಿಲ್ 1ರಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿತ್ತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಇವತ್ತು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಜೆಎಸ್‍ಎಸ್ ಮಹಾವಿದ್ಯಾಪೀಠ ಹಾಗೂ ಸಂಸ್ಥೆಯ ನೌಕರರಿಂದ 50 ಲಕ್ಷ ರೂ.ಗಳ ದೇಣಿಗೆಯನ್ನು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಸಚಿವರಿಗೆ ನೀಡಿದ್ದರು.