Connect with us

Districts

ಲೈಟ್ ಕಂಬಕ್ಕೆ ಡಿಕ್ಕಿ- ಹೊತ್ತಿ ಉರಿದ ಆಯಿಲ್ ಟ್ಯಾಂಕರ್

Published

on

ತುಮಕೂರು: ಲೈಟ್ ಕಂಬಕ್ಕೆ ಆಯಿಲ್ ಟ್ಯಾಂಕರ್ ಡಿಕ್ಕಿ ಹೊಡೆದು ಲಾರಿ ಹೊತ್ತಿ ಉರಿದಿರುವ ಘಟನೆ ಗುಬ್ಬಿ ತಾಲೂಕಿನ ಸೋಮಾಲಪುರ ಹೆದ್ದಾರಿ 84 ರಲ್ಲಿ ನಡೆದಿದೆ.

ಸಿರಾ ಮಾರ್ಗವಾಗಿ ಮೈಸೂರಿಗೆ ಹೋಗುತ್ತಿದ್ದ ಟ್ಯಾಂಕರ್, ದಾರಿ ಮಧ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದಲ್ಲಿದ್ದ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಸಮಯದಲ್ಲಿ ಡಿಕ್ಕಿ ಹೊಡೆದ ರಭಸಕ್ಕೆ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಾರಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಈ ಅವಘಡದಲ್ಲಿ ಟ್ಯಾಂಕರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ತಕ್ಷಣ ಸ್ಥಳಕ್ಕೆ ಬಂದ ಅಗ್ನಿ ಶಾಮಕದಳ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ. ಈ ಸಂಬಂಧ ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Click to comment

Leave a Reply

Your email address will not be published. Required fields are marked *