ತುಮಕೂರು: ವೀರ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ತುಮಕೂರು ವಿಶ್ವ ವಿದ್ಯಾಲಯ ಒಪ್ಪಿಗೆ ಸೂಚಿಸಿದೆ.
ಪ್ರಸಕ್ತ ಸಾಲಿನ 6ನೇ ಸಿಂಡಿಕೇಟ್ ಸಭೆಯಲ್ಲಿ ಸಾವರ್ಕರ್ ಅಧ್ಯಯನ ಪೀಠಕ್ಕೆ ಒಪ್ಪಿಗೆ ನೀಡಲಾಗಿದ್ದು, ಆಂತರಿಕ ನಿಧಿ ಬಳಸಿಕೊಳ್ಳಲು ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಶುಕ್ರವಾರ ನಡೆದ ಸಭೆಯಲ್ಲಿ ವಿವಿ ಸಿಂಡಿಕೇಟ್ ಸದಸ್ಯ ವಿನಯ್ ಸಭೆಯ ಅಜೆಂಡಾದಲ್ಲಿ ಸಾವರ್ಕರ್ ಪೀಠ ಸ್ಥಾಪನೆಯ ವಿಷಯದ ಬಗ್ಗೆ ಪ್ರಸ್ತಾಪಿಸಿದ್ದರು. ಇದಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ.
Advertisement
Advertisement
ಈ ವೇಳೆ ಸಾವರ್ಕರ್ ಪೀಠ ಸ್ಥಾಪನೆಗೆ ಸದಸ್ಯ ವಿನಯ್ 1 ಲಕ್ಷ ರೂ. ಮೂಲ ಠೇವಣಿಯನ್ನು ಇಟ್ಟಿದ್ದಾರೆ. ಸಾವರ್ಕರ್ ಪೀಠ ಸ್ಥಾಪನೆಗೆ ಅಗತ್ಯ ಇರುವ ಕರಡು ಪರಿನಿಯಮ ಸಿದ್ಧಗೊಂಡಿದ್ದು, ಪೀಠ ಕಾರ್ಯಾರಂಭಕ್ಕೆ ಬೇಕಾಗಿರುವ 25 ಲಕ್ಷ ರೂ. ದಾನಿಗಳಿಂದ ಸಂಗ್ರಹಿಸಲು ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ: 8ನೇ ತರಗತಿ ಪಠ್ಯದಲ್ಲಿ ಸಾವರ್ಕರ್ ಪಾಠ
Advertisement
Advertisement
ಈ ಬಗ್ಗೆ ಸಿಂಡಿಕೇಟ್ ಸದಸ್ಯ ವಿನಯ್ ಮಾತನಾಡಿ, ನಿನ್ನೆ ನಡೆದ ಸಿಂಡಿಕೇಟ್ ಸಭೆಯಲ್ಲಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ನಿರ್ಧರಿಸಲಾಗಿದೆ. ನಾನು ಅದರ ಪ್ರಸ್ತಾವನೆಯನ್ನು ಸಭೆ ಮುಂದಿಟ್ಟಿದ್ದೆ. ಸರ್ವಾನುಮತದಿಂದ ಅನುಮೋದನೆಗೊಂಡಿದೆ. ಆರಂಭಿಕವಾಗಿ ನಾನು 1 ಲಕ್ಷ ರೂ. ಠೇವಣಿ ಇಟ್ಟಿದ್ದೇನೆ. ಮುಂದಿನದ ದಿನದಲ್ಲಿ ಎಲ್ಲವೂ ಅನುಷ್ಠಾನ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಠ್ಯ, ಪುಸ್ತಕ ಪರಿಷ್ಕರಣೆಗೆ ಮುಂದುವರಿದ ವಿರೋಧ- ತಮ್ಮ ಕವಿತೆಯನ್ನು ಬಳಸಬೇಡಿ: ರೂಪಾ ಹಾಸನ