ತುಮಕೂರು: ಹಾಸ್ಟೆಲ್‍ನಲ್ಲಿ ವಿಷದೂಟ ಸೇವಿಸಿ ಮೂರು ಮಕ್ಕಳು ಮೃತರಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾವಾರಿಧಿ ಶಾಲೆಯ ಮಾಜಿ ಪ್ರಾಂಶುಪಾಲ ರವಿಕುಮಾರ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Advertisement
ಮಾರ್ಚ್ 9 ರಂದು ಮಾಜಿ ಶಾಸಕ ಕಿರಣ್‍ಕುಮಾರ್ ಒಡೆತನದ ವಿದ್ಯಾವಾರಿಧಿ ಶಾಲೆಯ ಹಾಸ್ಟೆಲ್‍ನಲ್ಲಿ ಮಕ್ಕಳು ವಿಷಾಹಾರ ಸೇವನೆಯಿಂದ ಮೃತಪಟ್ಟಿದ್ದರು. ಇನ್ನೂ ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸೆಕ್ಯೂರಿಟಿ ಗಾರ್ಡ್ ರಮೇಶ್ ಮಾರ್ಚ್ 11 ರಂದು ಸಾವನ್ನಪ್ಪಿದ್ದರು.
Advertisement
ಇದನ್ನೂ ಓದಿ: ತುಮಕೂರು: ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್- 3 ವಿದ್ಯಾರ್ಥಿಗಳ ದುರ್ಮರಣ
Advertisement
ವಿಷಾಹಾರ ಸೇವಿಸಿ ಸಾವನ್ನಪ್ಪಿದ್ದ ಮಕ್ಕಳ ಮರಣೋತ್ತರ ಪರೀಕ್ಷೆ ನಡೆದಿದ್ದು, ಮಕ್ಕಳ ದೇಹದಲ್ಲಿ ದ್ರವರೂಪದ ವಿಷಕಾರಿ ಅಂಶವಿರುವುದು ಪತ್ತೆಯಾಗಿತ್ತು. ವಿದ್ಯಾವಾರಿಧಿ ಶಾಲೆಯ ಮಾಜಿ ಪ್ರಾಂಶುಪಾಲ ರವಿಕುಮಾರ್ ಕೂಡ ಘಟನೆ ಬಳಿಕ ತಲೆ ಮರೆಸಿಕೊಂಡಿದ್ದರು.
Advertisement
ಮಾರ್ಚ್ 8ರ ರಾತ್ರಿ ನಡೆದಿದ್ದೇನು?: ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯ ವಿದ್ಯಾವಾರಿಧಿ ಇಂಟರ್‍ನ್ಯಾಷನಲ್ ಬೋರ್ಡಿಂಗ್ ಶಾಲೆಯಲ್ಲಿ ವಿಷಯುಕ್ತ ಆಹಾರ ಸೇವಿಸಿ 15 ವರ್ಷದ ಶ್ರೇಯಸ್, ಆಕಾಂಕ್ಷ್ ಪಲ್ಲಕ್ಕಿ ಹಾಗೂ ಶಾಂತಮೂರ್ತಿ ಎಂಬ ಮೂವರು ಅಮಯಾಕ ಮಕ್ಕಳು ಸಾವನಪ್ಪಿದ್ದರು. ಈ ಶಾಲೆ ಬಿಜೆಪಿಯ ಮಾಜಿ ಶಾಸಕ ಕಿರಣ್ ಕುಮಾರ್ ಅವರಿಗೆ ಸೇರಿದ್ದಾಗಿದೆ.
ಕಿರಣ್ ಅವರೊಂದಿಗಿನ ವೈಮನಸ್ಸಿನಿಂದ ರವಿ ಶಾಲೆಯಿಂದ ಹೋರಹೋಗಿದ್ದರು ಎಂದು ಹೇಳಲಾಗಿದೆ. ಪ್ರಕರಣದ ನಂತರ ನಾಪತ್ತೆಯಾಗಿದ್ದ ರವಿಕುಮಾರ್ ಅವರನ್ನು ವಶಕ್ಕೆ ಪಡೆದಿದ್ದು, ತಿಪಟೂರು ಡಿವೈಎಸ್‍ಪಿ ವೇಣುಗೋಪಾಲ್ ನೇತೃತ್ವದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.