ಬಳ್ಳಾರಿ: ತುಂಗಭದ್ರಾ ಜಲಾಶಯದ (Tungabhadra Dam) ಕ್ರಸ್ಟ್ ಗೇಟ್ ಸಂಖ್ಯೆ 19ಕ್ಕೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ.
ಕೊಚ್ಚಿ ಹೋಗಿದ್ದ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ಗೆ ಎಲಿಮೆಂಟ್ ಅಳವಡಿಕೆ ಮಾಡಲಾಗಿತ್ತು. 19ನೇ ಗೇಟ್ ಸಂಪೂರ್ಣ ಬಂದ್ ಆಗಿದ್ದು, ಸೋರಿಕೆಯಾಗುತ್ತಿದ್ದ ನೀರಿಗೆ ಬ್ರೇಕ್ ಹಾಕಿದ್ದಾರೆ. ಇನ್ನೂ ಇದೆ: ನಕಲಿ ಎನ್‍ಸಿಸಿ ಶಿಬಿರ ಆಯೋಜಿಸಿ 13 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ – 11 ಮಂದಿ ಅರೆಸ್ಟ್
ಆಗಸ್ಟ್ 17 ರಂದು ಸಂಜೆ ಸ್ಟಾಪ್ ಲಾಗ್ ಗೇಟ್‌ನ ಐದು ಎಲಿಮೆಂಟ್‌ಗಳನ್ನು ಜೋಡಿಸಲಾಗಿತ್ತು. ಎಲಿಮೆಂಟ್‌ಗಳ ಸಂದುಗಳಿಂದ ಸುಮಾರು 509 ಕ್ಯೂಸೆಕ್ ನಷ್ಟು ನೀರು ಹೊರ ಹರಿಯುತ್ತಿತ್ತು. ಸಿಬ್ಬಂದಿಗಳು ದುರಸ್ತಿ ಕಾರ್ಯ ಮುಂದುವರೆಸಿ ಗೇಟ್‌ನ ಸಂದುಗಳನ್ನು ಮುಚ್ಚಿ ಸೋರಿಕೆ ತಡೆದಿದ್ದಾರೆ. ಇದರೊಂದಿಗೆ ಡ್ಯಾಂನಿಂದ 10,700 ಕ್ಯೂಸೆಕ್ ನೀರು ಮಾತ್ರ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ಹರಿಸಲಾಗುತ್ತಿದೆ. ಈಗಾಗಲೇ ಜಲಾಶಯದಲ್ಲಿ ನೀರಿನ ಸಂಗ್ರಹಣೆ ಏರಿಕೆಯಾಗುತ್ತಿದೆ. ಇನ್ನೂ ಇದೆ: ಭಾರತೀಯರು ಜನಸಂಖ್ಯೆ ನಿಯಂತ್ರಣಕ್ಕೆ ಹೆಚ್ಚು ಗಮನ ಹರಿಸುತ್ತಿಲ್ಲ: ನಾರಾಯಣ ಮೂರ್ತಿ
ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಬಳಿಕ ಭಾನುವಾರ ರಾತ್ರಿ 8 ಗಂಟೆ ವೇಳೆಗೆ ಸುಮಾರು 2 ಟಿಎಂಸಿ ನೀರು ಸಂಗ್ರಹವಾಗಿದೆ. ಗೇಟ್ ದುರಸ್ತಿ ಕಾಮಗಾರಿ ಯಶಸ್ವಿಯಾಗಿರುವ ಹಿನ್ನೆಲೆ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನೂ ಇದೆ: ಡ್ರಾಪ್ ನೆಪದಲ್ಲಿ ಲೈಂಗಿಕ ದೌರ್ಜನ್ಯ – ಡ್ಯಾನ್ಸ್ ಕೊರಿಯೋಗ್ರಾಫರ್ ಅರೆಸ್ಟ್