ಕೊಪ್ಪಳ: ತುಂಗಭದ್ರಾ ಜಲಾಶಯದ (Tungabhadra Dam) ಕ್ರಸ್ಟ್ ಗೇಟ್ ಅಳವಡಿಕೆಗೆ ಮಳೆ ಭೀತಿ ಎದುರಾಗಿದೆ. ಆಗಸ್ಟ್ 17ರಿಂದ ಜಲಾನಯನ, ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ.
ಮಳೆ ಬಂದರೆ ತುಂಗಭದ್ರಾ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಳವಾಗಲಿದೆ. ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದರೆ ಗೇಟ್ ಅಳವಡಿಕೆ ಸವಾಲಿನ ಕೆಲಸ ಆಗಲಿದೆ. ಮಳೆ ಮುನ್ಸೂಚನೆಯಿಂದ ಟಿಬಿ ಡ್ಯಾಂ ಬೋರ್ಡ್ ಮತ್ತು ತಜ್ಞರು ಚಿಂತಿತರಾಗಿದ್ದಾರೆ. ಇದನ್ನೂ ಓದಿ: ಟಿಬಿ ಡ್ಯಾಂಗೆ ಸ್ಟಾಪ್ ಲಾಗ್ ಗೇಟ್ ಅಳವಡಿಸಲು ಪ್ಲಾನ್ – ಏನೇನು ತಯಾರಿ ನಡೆಯುತ್ತಿದೆ?
ಆ.16 ರ ಒಳಗೆ ಕೆಲಸ ಮುಗಿಸಲು ಪ್ಲಾನ್ ಮಾಡಲಾಗಿತ್ತು. ಎರಡು ದಿನಗಳಲ್ಲಿ ಕೆಲಸ ಪೂರ್ಣಗೊಳಿಸಲು ಶತಪ್ರಯತ್ನ ಮಾಡಲಾಗಿತ್ತು. ಈಗಾಗಲೇ ತುಂಗಭದ್ರಾ ಜಲಾಶಯದ 19 ನೇ ಕ್ರಸ್ಟ್ ಗೇಟ್ ಅಳವಡಿಕೆಗೆ ಸಿದ್ಧವಾಗಿದೆ.
ಅಧಿಕಾರಿಗಳು ನಿನ್ನೆ ಸಂಜೆಯಿಂದಲೇ ಗೇಟ್‌ಗಳ ಬಿಡಿ ಭಾಗಗಳನ್ನು ಜಲಾಶಯಕ್ಕೆ ಸಾಗಿಸಿದ್ದಾರೆ. ತಜ್ಞ ಕನ್ನಯ್ಯನಾಯ್ಡು ನೇತೃತ್ವದಲ್ಲಿ ಗೇಟ್ ಅಳವಡಿಕೆ ಕಾರ್ಯ ನಡೆಯಲಿದೆ. ಇಂದು ಬೆಳಗ್ಗೆಯೇ ತಜ್ಞರು ಮತ್ತು ಕಾರ್ಮಿಕರು ಜಲಾಶಯಕ್ಕೆ ಬಂದಿದ್ದಾರೆ. ಇಂದಿನಿಂದ ಗೇಟ್ ಅಳವಡಿಕೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಹೆಚ್ಚುವರಿ ನೀರು ಲೆಕ್ಕಕ್ಕೆ ಪರಿಗಣಿಸಿ – CWRC ಮುಂದೆ ಕರ್ನಾಟಕದ ಮನವಿ