ಬಳ್ಳಾರಿ: ತುಂಗಭದ್ರಾ ಜಲಾಶಯ (Tungabhadra Dam) ಸ್ಟಾಪ್‌ಲಾಗ್ ಗೇಟ್ ಅಳವಡಿಸುವ ಜಾಗಕ್ಕೆ ಇಂದು ವಿಜಯನಗರ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ (Zameer Ahmad) ಭೇಟಿ ನೀಡಿ ಕೆಲಸಗಾರರ ಜೊತೆ ಮಾತನಾಡಿ ಧೈರ್ಯ ತುಂಬಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಧೈರ್ಯ ಕಳೆದುಕೊಳ್ಳದೇ ಕೆಲಸ ಮಾಡಿ. ನಾಳೆ ಗೇಟ್ ಕೂಡಿಸಿ ಕಾರ್ಯ ಯಶಸ್ವಿ ಮಾಡಿ. ನನ್ನ ಕಡೆಯಿಂದ ಪ್ರತಿ ಕಾರ್ಮಿಕನಿಗೆ 50 ಸಾವಿರ ರೂ. ಕೊಡುತ್ತೇನೆ. ಧೈರ್ಯವಾಗಿ ಕೆಲಸ ಮಾಡಿ ಎಂದು ಹೇಳಿದರು.
Advertisement
ಸ್ಟಾಪ್ ಲಾಗ್ ಗೇಟ್ ಕೂರಿಸಲು ಕನ್ನಯ್ಯ ಮತ್ತು ತಂಡದ ಸದಸ್ಯರು ಇಂದು ಹರಸಾಹಸ ಪಟ್ಟಿದ್ದಾರೆ. ಸಚಿವ ಜಮೀರ್ ಅಹ್ಮದ್ 50 ಸಾವಿರ ರೂ. ಕೊಡುತ್ತೇನೆ ಎಂದಿದ್ದಕ್ಕೆ ಕಾರ್ಮಿಕರು ಸಂತಸಪಟ್ಟಿದ್ದಾರೆ. ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ – ಪತಿ, ಮಕ್ಕಳ ವಿರುದ್ಧ ಕೊಲೆ ಆರೋಪ
Advertisement
Advertisement
ಶುಕ್ರವಾರ ಮತ್ತೆ ಪ್ರಯತ್ನ
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿ ಐದು ದಿನಗಳಾಗಿದೆ. ಅದರ ಜಾಗದಲ್ಲಿ ಇಂದು ತಾತ್ಕಾಲಿಕ ಗೇಟ್ ಕೂರಿಸುವ ಪ್ರಯತ್ನ ಫಲ ಕೊಡಲಿಲ್ಲ. ಗೇಟ್ ಎಲಿಮೆಂಟ್‌ನಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ – ಶೀಘ್ರವೇ ಆಪರೇಷನ್ ಬಿಪಿಎಲ್ ಕಾರ್ಡ್
Advertisement
ಶುಕ್ರವಾರ ಮತ್ತೊಮ್ಮೆ ಪ್ರಯತ್ನ ನಡೆಸಲಾಗುತ್ತದೆ. ಮೊದಲ ಎಲಿಮೆಂಟ್ ಅಳವಡಿಕೆ ಯಶಸ್ವಿಯಾದಲ್ಲಿ 25 ಟಿಎಂಸಿ ನೀರು ಜಲಾಶಯದಿಂದ ಹೊರಹೋಗುವುದನ್ನು ತಪ್ಪಿಸಿದಂತಾಗುತ್ತದೆ. ಮೊನ್ನೆಯವರೆಗೂ 25 ಸಾವಿರ ಕ್ಯೂಸೆಕ್‌ಗಿಂತ ಕಡಿಮೆ ಇದ್ದ ಒಳಹರಿವು ನಿನ್ನೆಯಿಂದ 35ಸಾವಿರ ಕ್ಯೂಸೆಕ್‌ಗೆ ಹೆಚ್ಚಿದೆ.