ವಿಜಯನಗರ: 2ನೇ ಬಾರಿಗೆ ತುಂಗಭದ್ರಾ ಜಲಾಶಯ (Tungabhadra Dam) ಭರ್ತಿಯಾದ ಹಿನ್ನೆಲೆ ಇಂದು (ಭಾನುವಾರ) ಸಿಎಂ ಸಿದ್ದರಾಮಯ್ಯ (Siddaramaiah) ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
ವಿಜಯನಗರ ಜಿಲ್ಲೆ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ಗೆ ತಾತ್ಕಾಲಿಕ ಗೇಟ್ ಅಳವಳಡಿಕೆಯ 25 ದಿನಗಳ ಬಳಿಕ ಡ್ಯಾಂ ಭರ್ತಿಯಾಗಿದೆ. ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯ ಮತ್ತೆ ಭರ್ತಿ ಹಿನ್ನೆಲೆ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಬಾಗಿನ ಅರ್ಪಣೆ ಕಾರ್ಯಕ್ರಮದ ಸಲುವಾಗಿ ತುಂಗಭದ್ರಾ ಜಲಾಶಯ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಜಲಾಶಯದ ಸೇತುವೆಯ ಮೇಲೆ ಕನ್ನಡ ಧ್ವಜಗಳು ರಾರಾಜಿಸುತ್ತಿವೆ. ಅಲ್ಲದೇ ತಳಿರು ತೋರಣ, ಬಾಳೆಯಿಂದ ಜಲಾಶಯಯವನ್ನು ಅಲಂಕರಿಸಲಾಗಿದೆ. ಇದನ್ನೂ ಓದಿ: Bengaluru | ಹೇಗೆ ನಡೆಯುತ್ತೆ ಭೀಕರ ಕೊಲೆಯ ಮರಣೋತ್ತರ ಪರೀಕ್ಷೆ?
ಕ್ರಸ್ಟ್ ಗೇಟ್ ಕಿತ್ತುಹೋದ ಸಂದರ್ಭದಲ್ಲಿ ಸಿಎಂ ವೀಕ್ಷಣೆಗೆ ಆಗಮಿಸಿದ್ದರು. ಈ ವೇಳೆ ಮತ್ತೆ ಜಲಾಶಯ ತುಂಬುತ್ತೆ. ನಾನು ಬಾಗಿನ ಅರ್ಪಣೆ ಮಾಡಲು ಬರುವೆ ಎಂದು ಹೇಳಿದ್ದರು. ಅದೇ ರೀತಿ ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ಇಂದು ಬಾಗಿನ ಅರ್ಪಿಸಲಿದ್ದಾರೆ. ಬೆಳಗ್ಗೆ 11:0ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಜೊತೆ ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಲವು ಸಚಿವರು, ಶಾಸಕರು, ಸಂಸದರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಡಿಜಿಟಲ್ ಪೇಮೆಂಟ್‌ನಲ್ಲಿ ಬೆಂಗಳೂರಿಗರೇ ಫಸ್ಟ್ – ಸೆಪ್ಟೆಂಬರ್‌ನಲ್ಲಿ ಬಿಎಂಟಿಸಿಗೆ ಬರೋಬ್ಬರಿ 8 ಕೋಟಿ ಆದಾಯ
ಬಾಗಿನ ಅರ್ಪಣೆ ಬಳಿಕ 19ನೇ ಕ್ರಸ್ಟ್ಗೇಟ್ ಅಳವಡಿಕೆ ಕಾಮಗಾರಿಯಲ್ಲಿ ಭಾಗಿಯಾದ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಕೊಪ್ಪಳದ ಮುನಿರಾಬಾದ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೆಳಗ್ಗೆ 11:55 ಕ್ಕೆ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮ ಮುಕ್ತಾಯದ ಬಳಿಕ ಸಂಜೆ 4 ಗಂಟೆಗೆ ಸಿದ್ದರಾಮಯ್ಯ ಬೆಂಗಳೂರಿಗೆ ತೆರಳಲಿದ್ದಾರೆ. ಇದನ್ನೂ ಓದಿ: BBMP ವ್ಯಾಪ್ತಿಯ 110 ಹಳ್ಳಿ ಜನರ ಕನಸು ಶೀಘ್ರ ನನಸು – ಮುಂದಿನ ವಾರದಲ್ಲೇ ಮನೆಗಳಿಗೆ ಬರಲಿದೆ ಕಾವೇರಿ!