ವಿಜಯನಗರ: ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಕಳೆದ ಮೂರು ವರ್ಷಗಳಿಂದ ಉತ್ತಮ ಮಳೆಯಾಗಿದ್ದು, ಈ ವರ್ಷವೂ ತುಂಗಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದೆ. ಜಲಾಶಯ ಭರ್ತಿಯಾದ ಕೇವಲ ಒಂದೇ ತಿಂಗಳಲ್ಲಿ ನೀರು ಹಸಿರು ಬಣ್ಣಕ್ಕೆ ತಿರುಗಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಗುಂಡಾ ಸಸ್ಯಧಾಮದ ಬಳಿ ನೀರು ಹಸಿರು ಬಣ್ಣಕ್ಕೆ ತಿರುಗಿದೆ. ಸದ್ಯ ಜಲಾಶಯದಲ್ಲಿ ಒಟ್ಟು ನೀರಿನ ಸಂಗ್ರಹ ಸಾಮಥ್ರ್ಯ 100.86 ಟಿಎಂಸಿಯಷ್ಟಿದ್ದು, ಸದ್ಯ 100.06 ಟಿಎಂಸಿಯಷ್ಟು ನೀರು ಸಂಗ್ರಹವಿದೆ. ಇದನ್ನೂ ಓದಿ: ಈ ಬಾರಿಯೂ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸಬೇಕು: ಬಿಎಸ್‍ವೈ
ನೀರಿನ ಸಂಗ್ರಹ ಕಡಿಮೆ ಇರುವಾಗ ಹಸಿರು ಬಣ್ಣಕ್ಕೆ ತಿರುಗುವುದು ಸಾಮಾನ್ಯ. ಆದರೆ ಈಗ ಜಲಾಶಯ ಸಂಪೂರ್ಣವಾಗಿ ಭರ್ತಿ ಇದ್ದರೂ ನೀರಿನ ಬಣ್ಣ ಬದಲಾವಣೆ ಆಗಿರುವುದು ಜನರಲ್ಲಿ ಆತಂಕ ಮೂಡಿದೆ. ನದಿ ನೀರಿಗೆ ಕಾರ್ಖಾನೆಗಳ ತ್ಯಾಜ್ಯ ನೇರವಾಗಿ ಸಂಗ್ರಹವಾಗುತ್ತಿರುವುದು ಡ್ಯಾಂ ನೀರು ಬಣ್ಣ ಬದಲಾವಣೆಗೆ ಪ್ರಮುಖ ಕಾರಣ ಎಂಬುದು ಪರಿಸರವಾದಿಗಳ ಅಭಿಪ್ರಾಯ. ಕೂಡಲೇ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.