ಬಳ್ಳಾರಿ: ಮೂರು ರಾಜ್ಯ 8 ಜಿಲ್ಲೆಗಳ ಜೀವನಾಡಿ ತುಂಗಭದ್ರಾ ಜಲಾಶಯ (Tungabhadra Reservoir) ಬತ್ತಿ ಬರಿದಾಗಿದ್ದು ಜಲಾಶಯದ ವ್ಯಾಪ್ತಿಯ ರೈತರಿಗೆ ಇದೀಗ ಆತಂಕ ಶುರುವಾಗಿದೆ.
105 ಟಿಎಂಸಿ ಸಾಮರ್ಥ್ಯದ ತುಂಗಭದ್ರಾ ಜಲಾಶಯದಲ್ಲೀಗ ಕೇವಲ 5 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ. 3 ಟಿಎಂಸಿ ಡೆಡ್ ಸ್ಟೋರೇಜ್ ಇರೋ ಜಲಾಶಯದಲ್ಲೀಗ ಕೇವಲ 2 ಟಿಎಂಸಿ ನೀರು ಮಾತ್ರ ಹೆಚ್ಚುವರಿ ಇದ್ದು, ಆ 2 ಟಿಎಂಸಿ ನೀರಿನಲ್ಲಿಯೇ ಇನ್ನೊಂದು ತಿಂಗಳು ಕುಡಿಯುವ ನೀರು ಪೂರೈಕೆ ಮಾಡಬೇಕಾದ ಅನಿವಾರ್ಯತೆ ಇದೆ. ಇದನ್ನೂ ಓದಿ: ಮನೆ ಮಾಲೀಕನ ಪತ್ನಿಯನ್ನೇ ಲವ್ ಮಾಡಿ ಮದುವೆಯಾಗಿದ್ದ ವ್ಯಕ್ತಿಯ ಬರ್ಬರ ಹತ್ಯೆ!
ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು ನಾಲ್ಕು ಜಿಲ್ಲೆಗಳು ಸೇರಿದಂತೆ ಆಂಧ್ರ ಹಾಗೂ ತೆಲಂಗಾಣ ರಾಜ್ಯದ ಒಟ್ಟು 8 ಜಿಲ್ಲೆಗಳಿಗೆ ಇದೇ ಜಲಾಶಯದ ನೀರು ಅನಿವಾರ್ಯ. ಆದರೆ ನಿರೀಕ್ಷೆಯಂತೆ ಮಳೆ ಆಗದೇ ಕಲ್ಯಾಣ ಕರ್ನಾಟಕದ ನಾಲ್ಕೂ ಜಿಲ್ಲೆಗಳು ಸೇರಿದಂತೆ 8 ಜಿಲ್ಲೆಗಳಿಗೆ ನೀರಿನ ಹಾಹಾಕಾರ ಶುರುವಾಗೋದು ಗ್ಯಾರಂಟಿ ಎನ್ನಲಾಗಿದೆ. ಹೀಗಾಗಿ ಇರುವ ನೀರನ್ನ ಮ್ಯಾನೇಜ್ ಮಾಡಿ ಬಳಕೆ ಮಾಡೋದೇ ಟಿಬಿ ಬೋರ್ಡ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದನ್ನೂ ಓದಿ: ಉಗ್ರರ ದಾಳಿ ಬಳಿಕ ಕಾಶ್ಮೀರಕ್ಕೆ ಭೇಟಿ ನೀಡಿದ ಅತುಲ್ ಕುಲಕರ್ಣಿ