ರಾಯಚೂರು: ತುಂಗಭದ್ರಾ ಜಲಾಶಯದಿಂದ ನದಿಗೆ ಭಾರೀ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆ ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿ ಮಠದ ಶ್ರೀಗಳಾದ ಸುಬುಧೇಂದ್ರ ತೀರ್ಥ ಸ್ವಾಮಿಗಳು ತುಂಗಭದ್ರಾ ನದಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಜಲಾಶಯದಿಂದ ತುಂಗಭದ್ರಾ ನದಿಗೆ 1 ಲಕ್ಷ 41 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ರಾಯಚೂರು ಜಿಲ್ಲೆಯಲ್ಲಿ ತುಂಗಭದ್ರೆ ಮೈದುಂಬಿ ಹರಿಯುತ್ತಿದ್ದಾಳೆ. ಮಂತ್ರಾಲಯಕ್ಕೆ ಭಾರೀ ಪ್ರಮಾಣದ ನೀರು ತಲುಪಿದ ಹಿನ್ನೆಲೆ ವಿಶೇಷ ಪೂಜೆಯ ಮೂಲಕ ಶ್ರೀಗಳು ತುಂಗಭದ್ರೆಯನ್ನು ಸ್ವಾಗತಿಸಿದ್ದಾರೆ. ಇದನ್ನೂ ಓದಿ: ಮೂರು ತಿಂಗಳ ಮೊದಲೇ KRS ಡ್ಯಾಂ ಸಂಪೂರ್ಣ ಭರ್ತಿ
ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಮಂತ್ರಾಲಯ ರಾಯರ ಮಠದ ಬಳಿ ನದಿ ಪಾತ್ರಕ್ಕೆ ತೆರಳದಂತೆ ಭಕ್ತರಿಗೆ ಎಚ್ಚರಿಕೆ ನೀಡಲಾಗಿದೆ. ಪುಣ್ಯ ಸ್ನಾನಕ್ಕೆ ತೆರಳುವ ಭಕ್ತರಿಗೆ ನದಿ ಬಳಿ ನಿಷೇಧ ಹೇರಲಾಗಿದೆ. ಇದನ್ನೂ ಓದಿ: ಮಾಲ್‌ನಲ್ಲಿ ನಮಾಜ್ – ಮಾಲ್ ಬಹಿಷ್ಕರಿಸುವಂತೆ ಹಿಂದೂ ಸಂಘಟನೆಗಳಿಂದ ಕರೆ