ರಾಯಚೂರು: ತಾಲೂಕಿನ (Raichur) ಗಿಲ್ಲೆಸುಗೂರು ಬಳಿ ಆಂಧ್ರ ಪ್ರದೇಶ ಹಾಗೂ ಕರ್ನಾಟಕ ಮಾರ್ಗದಲ್ಲಿ ತುಂಗಭದ್ರಾ ನದಿಗೆ (Tungabhadra River) ನಿರ್ಮಿಸಿದ ಉಕ್ಕಿನ ಸೇತುವೆಯ (Steel Bridge) ಸರಳುಗಳು ತುಂಡಾಗಿ ಬಿದ್ದಿವೆ. ಇದರಿಂದ ರಾಯಚೂರು – ಮಂತ್ರಾಲಯ ಮಾರ್ಗದಲ್ಲಿ ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ರಾಯಚೂರು – ಮಂತ್ರಾಲಯಕ್ಕೆ ತೆರಳುವ ಮಾರ್ಗದ ಮುಖ್ಯ ಸೇತುವೆ ಇದಾಗಿದೆ. ನಿರ್ವಹಣೆ ಕೊರತೆಯಿಂದ ತುಕ್ಕು ಹಿಡಿದು ಸರಳುಗಳು ಮುರಿದುಬಿದ್ದಿವೆ. ಅದೃಷ್ಟವಶಾತ್ ಈ ಅವಘಡದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದನ್ನೂ ಓದಿ: ಭಾಗಮಂಡಲ ಮೇಲ್ಸೇತುವೆ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ

ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುರಿದು ಬಿದ್ದ ಸರಳನ್ನು ಪುನಃ ಜೋಡಿಸಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದು, ಸೂಕ್ತ ನಿರ್ವಹಣೆಗೆ ಆಗ್ರಹಿದ್ದಾರೆ.
2009ರಲ್ಲಿ ಸಂಭವಿಸಿದ್ದ ಮಹಾ ಪ್ರವಾಹದ ವೇಳೆ ಸೇತುವೆ ಕೊಚ್ಚಿ ಹೋಗಿತ್ತು. ಬಳಿಕ 2012ರಲ್ಲಿ ಹೊಸ ಸೇತುವೆ ಲೋಕಾರ್ಪಣೆ ಮಾಡಲಾಗಿತ್ತು. ಇದನ್ನೂ ಓದಿ: 1 ಲಕ್ಷ ಹಣದಾಸೆಗೆ ನವಜಾತ ಗಂಡು ಮಗುವನ್ನು ಮಾರಿದ ಪೋಷಕರು – ಆಶಾ ಕಾರ್ಯಕರ್ತೆಯರಿಂದ ಬಯಲಾಯ್ತು ಕೃತ್ಯ
