ಬೀದರ್: ಕೂಲಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಟ್ರಕ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಐವರು ಮಹಿಳೆಯರು (Women) ದಾರುಣವಾಗಿ ಸಾವಿಗೀಡಾದ ಘಟನೆ ಬೀದರ್‌ನಲ್ಲಿ ನಡೆದಿದೆ.
ಬೀದರ್ (Bidar) ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಗ್ರಾಮದ ಬಳಿ ಘಟನೆ ನಡೆದಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇನ್ನುಳಿದ 6 ಮಂದಿ ಮಹಿಳೆಯರಿಗೆ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ತಾಯ್ನಾಡಿಗೆ ಪ್ರಿಯಾಂಕಾ ಚೋಪ್ರಾ ಕಾಲಿಟ್ಟ ಬೆನ್ನಲ್ಲೇ ನಟಿಯ ವಿರುದ್ಧ ಗಂಭೀರ ಆರೋಪ
- Advertisement -
- Advertisement -
ಪ್ರಭಾವತಿ (36), ಯಾದಮ್ಮ (40), ಗುಂಡಮ್ಮ (52), ಜಕ್ಕಮ್ಮ (32) ಹಾಗೂ ರುಕ್ಮಿಣಿ (60) ಮೃತಪಟ್ಟ ಮಹಿಳೆಯರು. ಇದರೊಂದಿಗೆ ಚಿಕಿತ್ಸೆ ಪಡೆಯುತ್ತಿರುವ 6 ಮಂದಿ ಮಹಿಳೆಯರು ಉಡುಬಾಳು ಗ್ರಾಮದವರೇ ಆಗಿದ್ದಾರೆ. ಇದನ್ನೂ ಓದಿ: ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದ್ರೆ ಬಿಜೆಪಿಯವರಿಗೇನು ನೋವು?: ಡಿ.ಕೆ. ಶಿವಕುಮಾರ್
- Advertisement -
- Advertisement -
ಕೂಲಿ ಕೆಲಸ ಮುಗಿಸಿಕೊಂಡು ಸ್ವಗ್ರಾಮಕ್ಕೆ ಆಟೋದಲ್ಲಿ (Auto Rickshaw) ವಾಪಸಾಗುತ್ತಿದ್ದಾಗ ಬೆಮಳಖೇಡಾ ಪೊಲೀಸ್ ಠಾಣಾ (Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.