ನವದೆಹಲಿ: ಏರ್ ಇಂಡಿಯಾ ತನ್ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ(ಸಿಇಒ) ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಲು ಟರ್ಕಿಶ್ ಏರ್‍ಲೈನ್ಸ್‍ನ ಮಾಜಿ ಅಧ್ಯಕ್ಷ ಇಲ್ಕರ್ ಐಸಿ ಅವರಿಗೆ ಅವಕಾಶ ನೀಡಿತ್ತು. ಆದರೆ ಟಾಟಾ ಗ್ರೂಪ್‍ನ ಪ್ರಸ್ತಾಪವನ್ನು ಐಸಿ ನಿರಾಕರಿಸಿದ್ದಾರೆ.
ಫೆಬ್ರವರಿ 14ರಂದು ಟಾಟಾ ಸನ್ಸ್ ಇಲ್ಕರ್ ಐಸಿ ಅವರನ್ನು ಏರ್ ಇಂಡಿಯಾದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸುವುದಾಗಿ ಘೋಷಿಸಿತ್ತು. ಆದರೆ ಈ ಅವಕಾಶವನ್ನು ಐಸಿ ನಿರಾಕರಿಸಿದ್ದಾರೆ ಎಂದು ಏರ್ ಇಂಡಿಯಾ ಮಂಗಳವಾರ ತಿಳಿಸಿದೆ. ಇದನ್ನೂ ಓದಿ: Microsoft ಸಿಇಒ ಸತ್ಯ ನಾಡೆಲ್ಲಾ ಪುತ್ರ ನಿಧನ!
Advertisement
Advertisement
ರಾಷ್ಟ್ರೀಯ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕನಾಗಿ ಇಲ್ಕರ್ ಐಸಿ ಅವರನ್ನು ನೇಮಕ ಮಾಡಲು ಸರ್ಕಾರ ಅನುಮತಿ ನೀಡಬಾರದು ಎಂದು ಆರ್‍ಎಸ್‍ಎಸ್ ಅಂಗಸಂಸ್ಥೆ ಸ್ವದೇಶಿ ಜಾಗರಣಾ ವೇದಿಕೆ ಕಳೆದ ಶುಕ್ರವಾರ ಹೇಳಿತ್ತು. ಇದನ್ನೂ ಓದಿ: ಖಾರ್ಕಿವ್‍ನ ಆಡಳಿತ ಕಚೇರಿ ಮೇಲೆ ಬಾಂಬ್ ದಾಳಿ- ಕಟ್ಟಡ ಸಂಪೂರ್ಣ ಧ್ವಂಸ
Advertisement
ಇದೀಗ ಟಾಟಾ ಸನ್ಸ್‍ನಿಂದ ನೇಮಕಗೊಂಡ ಕೇವಲ 2 ವಾರಗಳ ಬಳಿಕ ಐಸಿ ಏರ್ ಇಂಡಿಯಾದ ಸಿಇಒ ಹುದ್ದೆಯನ್ನು ನಿರಾಕರಿಸಿದ್ದಾರೆ.