– ಇಂಧನ ತುಂಬಿಸಲು ಸರಕು ವಿಮಾನ ಪಾಕ್‌ನಲ್ಲಿ ಇಳಿದಿತ್ತು ಎಂದ ಟರ್ಕಿ ರಕ್ಷಣಾ ಸಚಿವಾಲಯ
ಅಂಕಾರಾ: ಭಾರತದ (India) ಜೊತೆಗಿನ ಉದ್ವಿಗ್ನತೆ ಮಧ್ಯೆ ಪಾಕಿಸ್ತಾನಕ್ಕೆ (Pakistan) ಶಸ್ತ್ರಾಸ್ತ್ರಗಳನ್ನು ಕಳುಹಿಸಲು ಟರ್ಕಿ (Turkey) ತಿರಸ್ಕರಿಸಿದೆ.
ಪಾಕಿಸ್ತಾನಕ್ಕೆ ಆರು ಶಸ್ತ್ರಾಸ್ತ್ರ ವಿಮಾನಗಳನ್ನು ಟರ್ಕಿ ಕಳುಹಿಸಿದೆ ಎಂಬ ಹೇಳಿಕೆಯನ್ನು ಸೋಮವಾರ ಅಧ್ಯಕ್ಷೀಯ ಸಂವಹನ ನಿರ್ದೇಶನಾಲಯ ನಿರಾಕರಿಸಿದೆ. ಇದನ್ನೂ ಓದಿ: ರಕ್ಷಣಾ ಸಾಮಾಗ್ರಿ ಹೊತ್ತುಕೊಂಡು ಟರ್ಕಿ ವಿಮಾನ ಪಾಕ್‌ನಲ್ಲಿ ಲ್ಯಾಂಡ್
ಟರ್ಕಿಯಿಂದ ಬಂದ ಸರಕು ವಿಮಾನವು ಇಂಧನ ತುಂಬಿಸಲು ಪಾಕಿಸ್ತಾನದಲ್ಲಿ ಇಳಿಯಿತು. ನಂತರ ಅದು ತನ್ನ ಮಾರ್ಗದಲ್ಲಿ ಮುಂದುವರಿಯಿತು. ಅಧಿಕೃತ ಸಂಸ್ಥೆಗಳು ಬಿಟ್ಟು ಬೇರೆ ಯಾರಿಂದಲಾದರೂ ಊಹಾತ್ಮಕ ಹೇಳಿಕೆಗಳು, ಸುದ್ದಿಗಳು ಬಂದರೆ ಅವುಗಳನ್ನು ಪರಿಗಣಿಸಬಾರದು ಎಂದು ಟರ್ಕಿ ರಕ್ಷಣಾ ಸಚಿವಾಲಯ ತಿಳಿಸಿದೆ.
ಟರ್ಕಿ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸುತ್ತಿದೆ ಎಂದು ಹಲವಾರು ಸುದ್ದಿವಾಹಿನಿಗಳು ವರದಿ ಮಾಡಿದ್ದವು. ಬಳಿಕ ಟರ್ಕಿ ಸರಕು ವಿಮಾನದ ಚಿತ್ರವನ್ನು ಪೋಸ್ಟ್ ಮಾಡಿ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: Pahalgam Attack | ಟಿಆರ್‌ಎಫ್‌ಗೆ ಭಾರತೀಯ ಯುವಕರೇ ಟಾರ್ಗೆಟ್ – ಈ ಭಯೋತ್ಪಾದಕ ಗುಂಪು ಹೇಗೆ ಕೆಲಸ ಮಾಡುತ್ತೆ?
ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಅಂಕಾರಾ ಖಂಡಿಸಿತ್ತು. ಈ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ್ದರು, ಅನೇಕರು ಗಾಯಗೊಂಡಿದ್ದರು.
ಜಮ್ಮು ಮತ್ತು ಕಾಶ್ಮೀರದ ಮುಸ್ಲಿಂ ಬಹುಸಂಖ್ಯಾತ ಪ್ರದೇಶವು ಬಹಳ ಹಿಂದಿನಿಂದಲೂ ಭಾರತ ಮತ್ತು ಪಾಕಿಸ್ತಾನದ ನಡುವಿನ ಕಹಿ ಪ್ರಾದೇಶಿಕ ವಿವಾದದ ಕೇಂದ್ರಬಿಂದುವಾಗಿದೆ. ಪರಮಾಣು ಶಸ್ತ್ರಸಜ್ಜಿತ ಪ್ರತಿಸ್ಪರ್ಧಿಗಳ ನಡುವಿನ ಸಂಬಂಧಗಳು ಹದಗೆಟ್ಟಿದೆ. ಸಂಭಾವ್ಯ ಮಿಲಿಟರಿ ಕ್ರಮದ ಬಗ್ಗೆ ಕಳವಳ ಹುಟ್ಟುಹಾಕಿದೆ. ಇದನ್ನೂ ಓದಿ: ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಮೇಲೆ ಬಾಂಬ್ ಸ್ಫೋಟ – 7 ಮಂದಿ ದುರ್ಮರಣ