ನವದೆಹಲಿ: ಶಿಕ್ಷಕನೊಬ್ಬ 14 ವರ್ಷದ ಅಪ್ರಾಪ್ತ ವಿದ್ಯಾರ್ಥಿಗೆ ಆತನ ಮನೆಯಲ್ಲಿಯೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಪೂರ್ವ ದೆಹಲಿಯಲ್ಲಿ ನಡೆದಿದೆ.
ಈ ಘಟನೆ ಶುಕ್ರವಾರ ನಡೆದಿದ್ದು, ಆರೋಪಿ ಶಿಕ್ಷಕ ಎರಡು ತಿಂಗಳಿನಿಂದ ವಿದ್ಯಾರ್ಥಿಗೆ ಭೋದನೆ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಸದ್ಯಕ್ಕೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
35 ವರ್ಷ ವಯಸ್ಸಿನ ಆರೋಪಿ ಶಿಕ್ಷಕ ಹೈಡ್ ಆ್ಯಂಡ್ ಸೀಕ್ ಆಟವನ್ನು ಆಡೋಣ ಎಂದು ಹೇಳಿ ಹುಡುಗನನ್ನು ಬಾತ್‍ರೂಮ್ ಒಳಗೆ ಕರೆದುಕೊಂಡು ಹೋಗಿ ಅಡಗಿಸಿಟ್ಟಿದ್ದಾನೆ. ಅಲ್ಲಿ ಹುಡುಗನನ್ನು ಅನುಚಿತವಾಗಿ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಈ ಘಟನೆ ನಡೆದ ವೇಳೆಯಲ್ಲಿ ಹುಡುಗನ ಪೋಷಕರು ಮನೆಯಲ್ಲಿ ಇರಲಿಲ್ಲ. ವಿದ್ಯಾರ್ಥಿಯ ಪೋಷಕರು ಮನೆಗೆ ಬಂದಾಗ ನಡೆದ ಘಟನೆಯ ಬಗ್ಗೆ ವಿವರಿಸಿದ್ದಾನೆ. ಬಳಿಕ ಪೋಷಕರು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮೇಘನಾ ಯಾದವ್ ಹೇಳಿದ್ದಾರೆ.
ಪೊಲೀಸರು ಈ ಕುರಿತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv