ಬೈಕ್‌ಗೆ ಟ್ರಕ್‌ ಡಿಕ್ಕಿ – 23 ವಯಸ್ಸಿನ ಸೀರಿಯಲ್‌ ನಟ ದುರ್ಮರಣ

Public TV
0 Min Read
Aman Jaiswal

ಮುಂಬೈ: ಇಲ್ಲಿನ ಜೋಗೇಶ್ವರಿ ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಟಿವಿ ಸೀರಿಯಲ್ ನಟ ಅಮನ್ ಜೈಸ್ವಾಲ್ (23) ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟ ಅಮನ್ ‌’ಧರ್ತಿಪುತ್ರ ನಂದಿನಿ’ ಧಾರಾವಾಹಿಯಲ್ಲಿ ಪ್ರಮುಖ ಪಾತ್ರಕ್ಕೆ ಹೆಸರುವಾಸಿಯಾಗಿದ್ದರು.

ಅಪಘಾತದಲ್ಲಿ ಗಾಯಗೊಂಡಿದ್ದ ಜೈಸ್ವಾಲ್ ಅವರನ್ನು ಕಾಮಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಅಂಬೋಲಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಟ್ರಕ್ ಚಾಲಕನ ವಿರುದ್ಧ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಗಾಗಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Share This Article