Bengaluru Rural

ಟಿವಿ ಶೋರೂಂ ಗೆ ಬೆಂಕಿ- ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Published

on

Share this

ಬೆಂಗಳೂರು: ನಗರದ ಹೊರವಲಯ ನೆಲಮಂಗಲ ಸಮೀಪದ ಮಾದನಾಯಕನ ಹಳ್ಳಿಯಲ್ಲಿರೋ ಶ್ರೀ ಶಾರದಾಂಬ ಎಂಟರ್‍ಪ್ರೈಸಸ್‍ನ ಟಿವಿ ಶೋ ರೂಂ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಸಬ್ ರಿಜಿಸ್ಟ್ರೇಶನ್ ಕಚೇರಿ ಕೆಳಬಾಗದಲ್ಲಿ ಕೆ.ಸಿ.ಮಂಜುನಾಥ್ ಎಂಬವರಿಗೆ ಸೇರಿದ ಈ ಶೋರೂಂಗೆ ಏಕಾಏಕಿ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆಗೆ ಶೋರೂಂನಲ್ಲಿದ್ದ ಎಲೆಕ್ಟ್ರಾನಿಕ್ ವಸ್ತಗಳಾದ ಟಿವಿಗಳು, ಫ್ರಿಡ್ಜ್, ವಾಷಿಂಗ್ ಮಶೀನ್, ಒವೇನ್ ಬೆಂಕಿಗಾಹುತಿಯಾಗಿವೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿರುವ ಸಾಧ್ಯತೆಗಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ. ಈ ಸಂಬಂಧ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement
Advertisement