– ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ
ತುಮಕೂರು: ಟಿವಿಕೆ (TVK) ಪಕ್ಷದ ಶಾಸಕ ಸುನೀಲ್ ಆನಂದ್ (N. Sunil Anand) ಅವರು ಶಾಸಕರಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಹುಟ್ಟೂರಿಗೆ ಭೇಟಿ ನೀಡಿದ್ದಾರೆ. ತುಮಕೂರು (Tumakuru) ಜಿಲ್ಲೆಯ ತುರುವೇಕೆರೆ (Turuvekere) ತಾಲೂಕಿನ ಹೊಡಿಕೆಘಟ್ಟ ಗ್ರಾಮಕ್ಕೆ ಆಗಮಿಸಿದ ಶಾಸಕರಿಗೆ ಗ್ರಾಮಸ್ಥರು ಅದ್ಧೂರಿ ಸ್ವಾಗತ ಕೋರಿದ್ದಾರೆ.
ತಮಿಳುನಾಡಿನ ಮೆಟ್ಟುಪಾಳ್ಯಂ ಕ್ಷೇತ್ರದ ಶಾಸಕರಾಗಿರುವ ಸುನೀಲ್ ಆನಂದ್ ಅವರು ತಮ್ಮ ಹುಟ್ಟೂರಾದ ಹೊಡಿಕೆಘಟ್ಟ ಗ್ರಾಮಕ್ಕೆ ಆಗಮಿಸಿ ಗ್ರಾಮಸ್ಥರನ್ನು ಭೇಟಿ ಮಾಡಿದರು. ಶಾಸಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಸ್ವಗ್ರಾಮಕ್ಕೆ ಆಗಮಿಸಿದ ಹಿನ್ನೆಲೆ ಗ್ರಾಮಸ್ಥರು ಸುನೀಲ್ ಆನಂದ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಇದನ್ನೂ ಓದಿ: ನವರಾತ್ರಿ ಸಮಯದಲ್ಲಿ ಸಂಸತ್ ವಿಶೇಷ ಅಧಿವೇಶನ ಸಾಧ್ಯತೆ
ಗ್ರಾಮಕ್ಕೆ ಆಗಮಿಸಿದ ಬಳಿಕ ಸುನೀಲ್ ಆನಂದ್ ಅವರು ಸ್ವಗ್ರಾಮದ ಕೆಂಪಮ್ಮದೇವಿ, ಮಾರಮ್ಮ ಹಾಗೂ ಸೋಮೇಶ್ವರ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಗ್ರಾಮಸ್ಥರೊಂದಿಗೆ ಮಾತನಾಡಿದ ಶಾಸಕ ಸುನೀಲ್ ಆನಂದ್, ತಮ್ಮ ಹುಟ್ಟೂರಿನ ಜನರೊಂದಿಗೆ ಸದಾ ಸಂಪರ್ಕದಲ್ಲಿರುವುದಾಗಿ ತಿಳಿಸಿದರು. ಗ್ರಾಮದ ಅಭಿವೃದ್ಧಿ ಹಾಗೂ ಗ್ರಾಮಸ್ಥರಿಗೆ ಅಗತ್ಯವಿರುವ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಇದನ್ನೂ ಓದಿ: ರಾಮನಗರ | ಹಳ್ಳದ ನೀರಲ್ಲಿ ಮುಳುಗಿ ಇಬ್ಬರು ಮಕ್ಕಳು ದುರ್ಮರಣ
ತಮ್ಮ ಹುಟ್ಟೂರಿಗೆ ಆಗಮಿಸಿದ ಸಂದರ್ಭದಲ್ಲಿ ಗ್ರಾಮಸ್ಥರು ತೋರಿದ ಪ್ರೀತಿ ಹಾಗೂ ಆತ್ಮೀಯ ಸ್ವಾಗತಕ್ಕೆ ಸುನೀಲ್ ಆನಂದ್ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಡಿಸೆಂಬರ್ನಲ್ಲಿ ಪ್ರಧಾನಿ ಮೋದಿ ಅಮೆರಿಕ ಪ್ರವಾಸ – ಟ್ರಂಪ್ ಜೊತೆಗೆ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ!

