Connect with us

Chikkaballapur

ಬೈಕ್‍, ಬಸ್ ಡಿಕ್ಕಿ- ಮಹಿಳೆ ಸ್ಥಳದಲ್ಲೇ ಸಾವು

Published

on

ಚಿಕ್ಕಬಳ್ಳಾಪುರ: TVS XLಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕನ್ನಮಂಗಲಪಾಳ್ಯ ಗೇಟ್ ಬಳಿ ನಡೆದಿದೆ.

ಭುವನಹಳ್ಳಿ ಗ್ರಾಮದ ಶಕುಂತಲಾ (45) ಮೃತ ಮಹಿಳೆಯಾಗಿದ್ದಾಳೆ. ಬೈಕ್‍ಗೆ ಹಿಂಬದಿಯಿಂದ ಚಿಕ್ಕಬಳ್ಳಾಪುರ-ಬೆಂಗಳೂರು ಮಾರ್ಗದಲ್ಲಿ ಸಂಚಾರ ಮಾಡುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‍ನ ಹಿಂಬದಿಯಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *