ಮುಂಬೈ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಲ್ಶಿರಾಸ್ ತಾಲೂಕಿನ ಅಕ್ಲುಜ್‍ನಲ್ಲಿ ಐಟಿ ಇಂಜಿನಿಯರ್ (Engineer) ಆಗಿರುವ ಅವಳಿ ಸಹೋದರಿಯಿಬ್ಬರು (Twin Sister) ಸೇರಿ ಒಂದೇ ವ್ಯಕ್ತಿಯನ್ನು ಮದುವೆಯಾದರು.
ಅವಳಿ ಸಹೋದರಿಯರಾದ ಪಿಂಕಿ ಮತ್ತು ರಿಂಕಿ ಐಟಿ ಇಂಜಿನಿಯರ್‌ಗಳಾಗಿದ್ದು, ಪ್ರಸ್ತುತ ಮುಂಬೈನಲ್ಲಿ (Mumbai) ಕೆಲಸ ಮಾಡುತ್ತಿದ್ದಾರೆ. ರಿಂಕಿ ಮತ್ತು ಪಿಂಕಿ ಬಾಲ್ಯದಿಂದಲೂ ಒಟ್ಟಿಗೆ ವಾಸಿಸುತ್ತಿದ್ದರು. ಅಷ್ಟೇ ಅಲ್ಲದೇ ಇಬ್ಬರಿಗೂ ಒಬ್ಬರನೊಬ್ಬರು ಬಿಟ್ಟು ಇರಲು ಸಾಧ್ಯವಿರಲಿಲ್ಲ. ಇದರಿಂದಾಗಿ ಮದುವೆ ಆಗುವುದಾದರೇ ಇಬ್ಬರು ಒಂದೇ ವ್ಯಕ್ತಿಯನ್ನು ಮದುವೆಯಾಗಬೇಕು (Marriage) ಎಂದು ನಿರ್ಧರಿಸಿದ್ದರು.
Two sisters, both IT professionals, from Mumbai marry same man from Akluj village in Solapur, Maharashtra. pic.twitter.com/xsTAaGhNAt
— Love (@LocalBabaji) December 4, 2022
ಮಲಶಿರಾಸ್ ತಾಲೂಕಿನ ನಿವಾಸಿ ಅತುಲ್ ಎಂಬಾತ ಇವರಿಬ್ಬರಿಗೂ ಪರಿಚಯವಾಗಿದ್ದ. ಅದೇ ಸಮಯಕ್ಕೆ ಪಿಂಕಿ ಮತ್ತು ರಿಂಕಿಯ ತಂದೆಯು ಮರಣ ಹೊಂದಿದ್ದು, ತಾಯಿಯು ಆಗಾಗ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಳು. ಈ ವೇಳೆ ರಿಂಕಿ ಮತ್ತು ಪಿಂಕಿಯ ಸಹಾಯಕ್ಕೆ ಅತುಲ್ ಧಾವಿಸುತ್ತಿದ್ದ. ಇದೇ ಪರಿಚಯ ಪ್ರೀತಿಗೆ ತಿರುಗಿ ಮೂವರು ಮದುವೆ ಆಗಲು ನಿರ್ಧರಿಸಿದ್ದು, ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಅದ್ಧೂರಿಯಾಗಿ ಮದುವೆ ಆದರು. ಇದನ್ನೂ ಓದಿ: ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ರಾಮುಲು ಗೈರು- ಮುರಿದು ಬಿತ್ತಾ ದಶಕಗಳ ಗೆಳೆತನದ ನಂಟು..?
ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಕಾನೂನುಬದ್ಧವೇ ಅಥವಾ ನೈತಿಕವೇ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ. ಇದನ್ನೂ ಓದಿ: ರೌಡಿಗಳನ್ನು ರೌಡಿಗಳೆನ್ನಬೇಡಿ – ಇದು ಮಾಜಿ ರೌಡಿ ಶೀಟರ್ ಸಿಟಿ ರವಿ ಫಾರ್ಮಾನು: ಕಾಂಗ್ರೆಸ್ ಲೇವಡಿ