ಹಾಸನ: ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸೂರಜ್ ರೇವಣ್ಣ (Suraj Revanna) ಪರವಾಗಿ ಸಂತ್ರಸನ ವಿರುದ್ಧ ದೂರು ನೀಡಿದ್ದ ದೂರುದಾರನೇ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಹೊಳೆನರಸೀಪುರ ನಗರ ಠಾಣೆಯಲ್ಲಿ (Holenarasipura City Police) ಎಂಎಲ್‌ಸಿ ಅವರ ಆಪ್ತ ಶಿವಕುಮಾರ್ ಜೂನ್ 21ರಂದು ದೂರು ನೀಡಿದ್ದರು. ಶಿವಕುಮಾರ್ ದೂರಿನ ಆಧಾರದ ಮೇಲೆಯೇ ಪೊಲೀಸರು ಸಂತ್ರಸ್ತನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಆದರೀಗ ದೂರು ನೀಡಿರುವ ಸಂತ್ರಸ್ತ ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಶಿವಕುಮಾರ್ (Shivakumar) ಫೋನ್ ಸಹ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರಿಂದ ದೂರುದಾರನ ನಡೆ ಬಗ್ಗೆಯೆ ಅನುಮಾನ ಹುಟ್ಟಿಕೊಂಡಿದೆ ಎನ್ನಲಾಗುತ್ತಿದೆ.
Advertisement
Advertisement
ಶಿವಕುಮಾರ್ ನೀಡಿದ ದೂರಿನಲ್ಲಿ ಏನಿತ್ತು?
ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಯುವಕ ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ನಾನು ಫೋನ್ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಹೋಗಿದ್ದ ಸಂತ್ರಸ್ತ ಕೆಲಸ ಕೇಳಿ ವಾಪಸ್ ಬಂದ ಬಳಿಕ ಬ್ಲಾಕ್‌ಮೇಲ್ ಮಾಡಲು ಆರಂಭಿಸಿದ್ದಾನೆ.
Advertisement
Advertisement
ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸ್ ಕೆಲಸ ಕೊಡಿಸುತ್ತಿಲ್ಲ. ನನಗೆ ತುಂಬಾ ಕಷ್ಟ ಇದೆ. ನನಗೆ ಹಣ ಬೇಕು. ನೀನು ನಿಮ್ಮ ಬಾಸ್‌ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ಹಾಕುತ್ತೇನೆ ಎಂದು ಬೆದರಿಕೆ ಹಾಕಿದ. ಈ ವಿಚಾರವನ್ನು ನಾನು ನಮ್ಮ ಬಾಸ್‌ಗೆ ತಿಳಿಸಿದೆ. ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸರು ಸೇರಿ ಹಲವಾರು ಜನರು ಇದ್ದರು. ನಾನೇನು ತಪ್ಪು ಮಾಡಿಲ್ಲ. ಯಾಕೆ ಹಣ ಕೊಡಬೇಕು ಎಂದು ಸೂರಜ್ ರೇವಣ್ಣ ಕೇಳಿದ್ದರು.
ಜೂನ್ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್‌ಸಿ ಸೀಲ್ ಹಾಕಿಸಿ ಫೋಟೋ ಹಾಕಿ ಬೆದರಿಕೆ ಹಾಕಿದ್ದಾನೆ. ಮೆಡಿಕಲ್ ಲೀಗಲ್ ಕೇಸ್ ಸೀಲ್ ಇರುವ ಅಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ. ಐದು ಕೋಟಿ ಬಳಿಕ ಮೂರು ಕೋಟಿ, ಕಡೆಗೆ ಎರಡೂವರೆ ಕೋಟಿಯಾದ್ರೂ ಹಣ ಕೊಡಿಸು ಎಂದು ಬೇಡಿಕೆ ಇಟ್ಟಿದ್ದಾನೆ.
ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬದ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ. ನಿಮ್ಮ ಬಾಸ್ ಹಣ ಕೊಡದಿದ್ದರೆ ದೊಡ್ಡ ದೊಡ್ಡವರು ಹಣ ಕೊಡಲು ರೆಡಿ ಇದ್ದಾರೆ. ನಾನು ಬೆಂಗಳೂರಿಗೆ ಹೋಗಿ ಮಾಧ್ಯಮದ ಮುಂದೆ ಹೋಗುತ್ತೇನೆ. ಸೂರಜ್ ರೇವಣ್ಣ ಗೌರವ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದರು.