ಕಲಬುರಗಿ: ಬಿಜೆಪಿ ಕಾರ್ಯಕರ್ತ (BJP Activist) ಶಿವಕುಮಾರ್ ಪೂಜಾರಿ (35) ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ.
ಆತ್ಮಹತ್ಯೆ ಕುರಿತಾಗಿ ಶಿವಕುಮಾರ್ ಪತ್ನಿ ಮಲ್ಲಮ್ಮ ಪೊಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.
Advertisement
Advertisement
ತನ್ನ ಪತಿ ಹನ್ನೆರಡು ಲಕ್ಷ ಸಾಲ ಮಾಡಿಕೊಂಡಿದ್ದ. ಸಾಲದ ಚಿಂತೆಯಲ್ಲಿ ಮದ್ಯ ಸೇವಿಸುತ್ತಿದ್ದ. ಮಳೆಯಾಗದೇ ಇದ್ದಿದ್ದರಿಂದ ಹೆಸರು ಬೆಳೆ ಹಾಳಾಗಿ ಹೋಗಿತ್ತು. ಸಾಲ ತೀರಿಸಲಿಕ್ಕಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪತಿಯ ಆತ್ಮಹತ್ಯೆ ಕೇಸ್ ನಲ್ಲಿ ಯಾರ ಮೇಲೆಯೂ ಅನುಮಾನ ಇಲ್ಲ ಎಂದು ಮಲ್ಲಮ್ಮ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಸಚಿವರಿಂದ ನನಗೆ ಕಿರುಕುಳ – ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣು
Advertisement
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಪೊಲೀಸ್ ಠಾಣೆಯಲ್ಲಿ ಕಳೆದ ರಾತ್ರಿ ಮಲ್ಲಮ್ಮ ದೂರು ದಾಖಲಿಸಿದ್ದಾರೆ. ಸದ್ಯ ದೂರು ಸ್ವೀಕರಿಸಿರುವ ಪೊಲೀಸರು ಯುಡಿಆರ್ (ಅಸಹಜ ಸಾವು) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆ ಮಾಡ್ಕೊಂಡ ವ್ಯಕ್ತಿ ಯಾರು ಅಂತಲೇ ಗೊತ್ತಿಲ್ಲ: ಶರಣ ಪ್ರಕಾಶ್ ಪಾಟೀಲ್
Advertisement
ಇತ್ತ ಸಾವಿಗೂ ಮುನ್ನ ಶಿವಕುಮಾರ್ ಆಡೀಯೋ ರೆಕಾರ್ಡ್ ಮಾಡಿದ್ದು, ಅದರಲ್ಲಿ ನನ್ನ ಸಾವಿಗೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮತ್ತು ಕಾಂಗ್ರೆಸ್ ನಾಯಕರೇ ಕಾರಣ ಅಂತ ಹೇಳಿರೋ ಆಡಿಯೋ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಬಿಜೆಪಿ ನಾಯಕರು ಪ್ರಕರಣವನ್ನು ಸಿಐಡಿ ಗೆ ನೀಡಬೇಕು ಅಂತ ಆಗ್ರಹಿಸಿದ್ದರು.
Web Stories