ಬೆಂಗಳೂರು: ಪೊಲೀಸ್ ಪೇದೆ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದ್ದು, ಪ್ರಮುಖ ಆರೋಪಿ ಶಿವಕುಮಾರ್ ಜೊತೆ ಮಾಜಿ ಸಿಎಂ ಪಿಎ ನಂಟು ಹೊಂದಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಹೌದು, ಪೊಲೀಸ್ ಪೇದೆ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣದ ಹಿಂದೆ ಬಿಜೆಪಿ ಮುಖಂಡ ಈಶಪ್ಪ ಕೈವಾಡ ಇದೆ ಎನ್ನುವ ವಿಚಾರ ಮೂಲಗಳು ತಿಳಿಸಿವೆ. ಶಾಸಕ ಸ್ಥಾನದ ಆಕಾಂಕ್ಷಿಯಾಗಿದ್ದ ಈಶಪ್ಪ ಶಿವಕುಮಾರ್ ಜೊತೆ ಸೇರಿಕೊಂಡಿದ್ದರು ಎನ್ನುವ ವಿಚಾರದ ಬಗ್ಗೆ ಮಾಹಿತಿ ಲಭ್ಯವಾಗಿದೆ.
Advertisement
Advertisement
ಕೊಪ್ಪಳದ ಗಜೇಂದ್ರಗಡದಲ್ಲಿ ಪ್ರಭಾವಿ ವ್ಯಕ್ತಿಯಾಗಿರುವ ಈಶಪ್ಪ, ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಈಗ ಕೋಟಿ ಕೋಟಿ ಒಡೆಯರಾಗಿ ಬದಲಾಗಿದ್ದಾರೆ. ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಲೀಕ್ ನಲ್ಲಿ ಸ್ವಾಮೀಜಿಯ ಕೈವಾಡ
Advertisement
ನವೆಂಬರ್ 25ರಂದು ನಡೆಯಬೇಕಿದ್ದ ಪೊಲೀಸ್ ಪೇದೆ ಹುದ್ದೆಯ ಲಿಖಿತ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿತ್ತು. ಹೀಗಾಗಿ ಪರೀಕ್ಷೆಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಭಾರೀ ಜಾಲವನ್ನು ಪತ್ತೆ ಹಚ್ಚಿ ಕಿಂಗ್ ಪಿನ್ ಸೇರಿದಂತೆ 115 ಮಂದಿಯನ್ನು ಬಂಧಿಸಿದ್ದರು.
Advertisement
ಕೊಡಗು ಜಿಲ್ಲೆಯ ಸೋಮವಾರಪೇಟೆಯ ವಿದ್ಯಾಮಂದಿರ ಕೊಠಡಿಯೊಂದರಲ್ಲಿ ರಾಜ್ಯದ ವಿವಿಧೆಡೆಯಿಂದ ಪರೀಕ್ಷಾರ್ಥಿಗಳನ್ನು ಕರೆಸಿಕೊಂಡು ಪ್ರಶ್ನೆ ಪತ್ರಿಕೆ ವಿತರಿಸಲು ಸಿದ್ಧತೆ ನಡೆಸಲಾಗಿತ್ತು. ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳುವ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಆದ್ರೆ ಈ ಮೊದಲೇ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿಗಳಾದ ಬಿ.ಆರ್.ವೇಣುಗೋಪಾಲ್, ಬಿ.ಬಾಲರಾಜು ನೇತೃತ್ವದ ಎರಡು ತಂಡಗಳು ದಾಳಿ ನಡೆಸಿದ್ದವು. ದಾಳಿ ವೇಳೆ ಕಿಂಗ್‍ಪಿನ್ ಶಿವಕುಮಾರ್‍ನನ್ನು ಪ್ರಶ್ನೆ ಪತ್ರಿಕೆಗಳ ಸಹಿತ ಬಂಧಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv