– ಟ್ವಿಸ್ಟ್ ಕೊಟ್ಟ ಮಹಿಳಾ ಆಯೋಗ
ಬೆಂಗಳೂರು: ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ ಮೂವರು ಸಂತ್ರಸ್ತೆಗೆ ಬೆದರಿಕೆ ಹಾಕಿರುವ ಆರೋಪವೊಂದು ಕೇಳಿಬಂದಿದೆ.
ಈ ಸಂಬಂಧ ಇಂದು ರಾಷ್ಟ್ರೀಯ ಮಹಿಳಾ ಆಯೋಗ ( National Women’s Commission) ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ಇದರಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಸಂತ್ರಸ್ತೆ ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣ- ರಾಜ್ಯಪಾಲರಿಗೆ ಹೆಚ್‍ಡಿಕೆ, ಜೆಡಿಎಸ್ ನಿಯೋಗ ದೂರು
- Advertisement
ಆಯೋಗ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಏನಿದೆ?: ಕರ್ನಾಟಕ ಪೊಲೀಸ್ ಹೆಸರಿನಲ್ಲಿ ಸಾಮಾನ್ಯ ಉಡುಪು ಧರಿಸಿದ್ದ ಮೂವರು ವ್ಯಕ್ತಿಗಳ ಮೇಲೆ ಮಹಿಳೆಯೋರ್ವಳು ದೂರು ನೀಡಿದ್ದಾರೆ. ತಮ್ಮನ್ನು ಕರ್ನಾಟಕ ಪೊಲೀಸ್ ಅಧಿಕಾರಿಗಳು ಎಂದು ಪರಿಚಯಿಸಿಕೊಂಡು, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸುಳ್ಳು ದೂರು ನೀಡುವಂತೆ ಒತ್ತಾಯಿಸಿದ್ದಾರೆ. ವಿವಿಧ ದೂರವಾಣಿ ಸಂಖ್ಯೆಗಳ ಮೂಲಕ ಕರೆ ಮಾಡಿ ದೂರು ನೀಡಬೇಕು ಎಂದು ಬೆದರಿಕೆ ಹಾಕಿದ್ದಾರೆ. ಸಂತ್ರಸ್ತೆ ತನ್ನ ಕುಟುಂಬದ ಹಿತಕ್ಕಾಗಿ ರಕ್ಷಣೆ ಕೋರಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಎತ್ತಿ ತೋರಿಸುತ್ತದೆ.
- Advertisement
700 ಮಹಿಳೆಯರು ಆನ್‌ಲೈನದ ಮೂಲಕ ದೂರು ನೀಡಿದ್ದಾರೆ ಎನ್ನಲಾಗಿದೆ. ಆದರೆ ಈ ಪ್ರಕರಣದಲ್ಲಿ ಯಾವುದೇ ದೂರು ಸ್ವೀಕರಿಸಿಲ್ಲ, NCW ಮಹಿಳೆಯರ ಕಾಳಜಿಗಳನ್ನು ಸಂಪೂರ್ಣವಾಗಿ ತನಿಖೆ ಮಾಡಲು ಬದ್ಧವಾಗಿದೆ, ಕರ್ನಾಟಕ ಪೊಲೀಸ್ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕ ಸಾಧಿಸುತ್ತದೆ.
ಒಟ್ಟಿನಲ್ಲಿ ಒಂದೆಡೆ ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಆದರೆ ಇತ್ತ ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ ಎನ್ನುವ ಮೂಲಕ ಆಯೋಗ ಸ್ಫೋಟಕ ತಿರುವು ಕೊಟ್ಟಿದೆ.