– ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಆರೋಪ
– ನಕಲಿ ದಾಖಲೆ ಸೃಷ್ಟಿಸಿ ಮುಡಾದಿಂದ ಸೈಟ್
ಮೈಸೂರು: ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಸೈಟ್ ಹಗರಣದ ಸದ್ದು ಜೋರಾಗುತ್ತಿದ್ದಂತೆ ಈಗ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರ ಸಂಬಂಧಿಯೂ ಮುಡಾದಿಂದ 19 ಸೈಟ್ ಪಡೆದಿರುವ ಗಂಭೀರ ಆರೋಪ ಕೇಳಿಬಂದಿದೆ.
Advertisement
ಹೌದು. ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿ ಜಿಟಿ ದೇವೇಗೌಡ (GT Devegowda) ಅವರ ಸಹೋದರಿಯ ಮಗ ಮಹೇಂದ್ರ (Mahendra) 19 ಸೈಟ್ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸಿಎಂ ಪರ ಜಿಟಿಡಿ ಬ್ಯಾಟಿಂಗ್ | ಕಳ್ಳರು ಕಳ್ಳರು ಒಂದಾಗಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ವ್ಯಂಗ್ಯ
Advertisement
Advertisement
ಏನಿದು ಆರೋಪ?
ಮಹೇಂದ್ರ ಎಂಬುವವರಿಗೆ ಸೇರಿದ ದೇವನೂರು ಗ್ರಾಮದ 2.22 ಎಕರೆ ಭೂಮಿಯನ್ನು ಉಪಯೋಗಿಸಿಕೊಂಡಿರುವುದಾಗಿ ಮುಡಾ ಹೇಳಿದೆ. ಆದರೆ ಯಾವಾಗ ಭೂಮಿಯನ್ನು ವಶಪಡಿಸಿಕೊಂಡು ಅಭಿವೃದ್ಧಿ ಪಡಿಸಿದ್ದೇವೆ ಎನ್ನುವ ಮಾಹಿತಿ ಮಾತ್ರ ಇಲ್ಲ. ಅಷ್ಟೇ ಅಲ್ಲದೇ ದೇವನೂರು ಗ್ರಾಮದ ಭೂಮಿಗೆ ವಿಜಯನಗರ 3ನೇ ಹಂತದಲ್ಲಿ ನಿವೇಶನ ನೀಡಲಾಗಿದೆ. ಇದನ್ನೂ ಓದಿ: ಮುಡಾ 50:50 ಅನುಪಾತ ರದ್ದು ಮಾಡಿ ಅಂತಾ ನಾನು ಹೇಳಲ್ಲ: ಜಿಟಿ ದೇವೇಗೌಡ ಅಚ್ಚರಿಯ ಹೇಳಿಕೆ
Advertisement
ಪ್ರೋತ್ಸಾಹದಾಯಕ ಯೋಜನೆಯಲ್ಲಿ ಸ್ವ ಇಚ್ಚೆಯಿಂದ ಬಿಟ್ಟುಕೊಟ್ಟಿದ್ದಾರೆ ಎಂದು ಕ್ರಯ ಪತ್ರದಲ್ಲಿ ನಮೂದಾಗಿದೆ. ಈ ಜಾಗ ನೀಡಿದ್ದಕ್ಕೆ ಕೇವಲ 2 ಸೈಟ್‌ಗಳನ್ನು ಮಾತ್ರ ನೀಡಬೇಕಿತ್ತು. 40*60 ಮತ್ತು 40*30 ರ 3600 ಚದರ ಅಡಿ ಮಾತ್ರ ಪರಿಹಾರ ಸಿಗಬೇಕಾಗಿತ್ತು. ಆದರೆ ನಗರದ ಪ್ರೈಮ್ ಜಾಗವಾದ ವಿಜಯನಗರದಲ್ಲಿ 19 ನಿವೇಶನಗಳನ್ನು ಹಂಚಿಕೆ ಮಾಡುವ ಮೂಲಕ ಪರಿಹಾರ ಸಿಕ್ಕಿದೆ. ಇದನ್ನೂ ಓದಿ: ಕೇಂದ್ರದಿಂದ ತರೋದನ್ನು ರಾಜ್ಯಕ್ಕೆ ತನ್ನಿ, ರಾಜೀನಾಮೆ ಕೇಳುತ್ತಾ ಕೂತರೆ ಹೇಗೆ – ಹೆಚ್‌ಡಿಕೆ ವಿರುದ್ಧವೇ ಜಿಟಿಡಿ ಕಿಡಿ
ಸ್ನೇಹಮಯಿ ಕೃಷ್ಣ ಹೇಳಿದ್ದು ಏನು?
ಈ ಭೂಮಿಯನ್ನ ಮುಡಾ ಯಾವಾಗ ವಶಪಡಿಸಿಕೊಂಡಿದೆ ಎಂಬ ಮಾಹಿತಿ ಸ್ಪಷ್ಟವಾಗಿಲ್ಲ. ಈ ಜಾಗದ ಮೂಲ ಮಾಲೀಕರು ಮಹೇಂದ್ರ ಅಲ್ಲ. ನಕಲಿ ದಾಖಲೆಗಳು ಸೃಷ್ಟಿ ಮಾಡಿಕೊಂಡು ಅಕ್ರಮವಾಗಿ ಪರಿಹಾರದ ಮೂಲಕ ನಿವೇಶನ ಪಡೆಯಲಾಗಿದೆ. ಮೂಲತಃ ಮಹೇಂದ್ರ ಎನ್ನುವ ವ್ಯಕ್ತಿಗೆ ದೇವನೂರು ಬಡಾವಣೆ ಜಾಗದಲ್ಲಿ ಜಮೀನು ಇಲ್ಲ. ಇದರ ಜೊತೆ ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ 19 ಸೈಟ್ ಹಂಚಿಕೆ ಮಾಡಿದ್ದಕ್ಕೆ ಮಾನದಂಡ ಏನು ಎಂದು ಪ್ರಶ್ನೆ ಮಾಡಿದ್ದಾರೆ.