100ಕ್ಕೂ ಹೆಚ್ಚು ಟ್ವಿಟ್ಟರ್ ಎಚ್‌ಆರ್ ಉದ್ಯೋಗಿಗಳು ವಜಾ

ವಾಷಿಂಗ್ಟನ್: ಟೆಸ್ಲಾ ಸಿಇಒ ಎಲೋನ್ ಮಸ್ಕ್ ಟ್ವಿಟ್ಟರ್ ಅನ್ನು ಸ್ವಾಧೀನಪಡಿಸುವುದಾಗಿ ಘೋಷಿಸಿದಾಗಿನಿಂದ ಟ್ವಿಟ್ಟರ್ ಉದ್ಯೋಗಿಗಳ ಭವಿಷ್ಯ ಅಪಾಯದಲ್ಲಿದೆ. ಇದೀಗ ಕಂಪನಿ ತನ್ನ ಉದ್ಯೋಗಿಗಳನ್ನು ತೆಗೆದುಹಾಕಲು ಪ್ರಾರಂಭಿಸಿದ್ದು, 100 ಉದ್ಯೋಗಿಗಳನ್ನು ವಜಾಗೊಳಿಸಿರುವುದನ್ನು ಟ್ವಿಟ್ಟರ್ ಖಚಿತಪಡಿಸಿದೆ.
ಟ್ವಿಟ್ಟರ್ ಆರೋಗ್ಯಕರವಾಗಿರಬೇಕು ಎಂದು ಹೇಳಿಕೆ ನೀಡಿದ ಮಸ್ಕ್, ಉದ್ಯೋಗಿಗಳನ್ನು ವಜಾಗೊಳಿಸುವ ಬಗ್ಗೆ ಸುಳಿವು ನೀಡಿದ್ದರು. ಕಂಪನಿಯ ಸ್ವಾಧೀನವನ್ನು ಕೊನೆಗೊಳಿಸಲು ಟ್ವಿಟ್ಟರ್ ಈ ಹಿಂದೆಯೂ ನೇಮಕಾತಿಯನ್ನು ಸ್ಥಗಿತಗೊಳಿಸಿತ್ತು. ಇದೀಗ ಮಾನವ ಸಂಪನ್ಮೂಲ ವಿಭಾಗದ 100 ಉದ್ಯೋಗಿಗಳು ಕಂಪನಿಯಿಂದ ವಜಾಗೊಂಡಿದ್ದಾರೆ. ಇದನ್ನೂ ಓದಿ: ಉದ್ಯೋಗಿಯಿಂದ ಅವಳಿ ಮಕ್ಕಳು – 51ರ ಮಸ್ಕ್ ಈಗ 9 ಮಕ್ಕಳ ತಂದೆ
ಕಂಪನಿಯಲ್ಲಿ ಅನಗತ್ಯ ಉದ್ಯೋಗಿಗಳ ಸಂಖ್ಯೆ ಹೆಚ್ಚಿದೆ ಎಂಬ ಕಾರಣಕ್ಕೆ ಮಸ್ಕ್ ಹಲವು ಬಾರಿ ಸ್ವಾಧೀನದ ಒಪ್ಪಂದದಿಂದ ಹಿಂದೆ ಸರಿದಿದ್ದರು. ಜೂನ್‌ನಲ್ಲಿ ಮಸ್ಕ್ ಟ್ವಿಟ್ಟರ್ ಉದ್ಯೋಗಿಗಳೊಂದಿಗೆ ಮಾಡಿದ ಮೊದಲ ಸಭೆಯಲ್ಲಿ ಕಂಪನಿ ಆರ್ಥಿಕವಾಗಿ ಆರೋಗ್ಯಕರವಾಗಿರಬೇಕು, ಇದು ವೆಚ್ಚವನ್ನು ಕಡಿಮೆ ಮಾಡುತ್ತದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ತೆರಿಗೆ ಪಾವತಿ ತಪ್ಪಿಸಲು 62,476 ಕೋಟಿ ರೂ.ಗಳನ್ನ ಚೀನಾಕ್ಕೆ ಕಳುಹಿಸಿದ ವಿವೋ- ED ತನಿಖೆ ವೇಳೆ ಅಕ್ರಮ ಬಯಲು