ರಾಹುಲ್‍ಗೆ ಶಾಕ್, ಶುಬ್‍ಮನ್‍ಗೆ ಚಾನ್ಸ್- ಬಿಸಿಸಿಐ ವಿರುದ್ಧ ಅಭಿಮಾನಿಗಳ ಕಿಡಿ

Public TV
3 Min Read
KL RAHUL

ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಟೂರ್ನಿಗೆ ಭಾರತದ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರ ನಡೆದ ಟೀಂ ಇಂಡಿಯಾ ಸ್ಟಾರ್ ಆರಂಭಿಕ ಆಟಗಾರ ರೋಹಿತ್ ಶರ್ಮಾ ಸ್ಥಾನದಲ್ಲಿ  ಮಯಾಂಕ್ ಅಗರ್ವಾಲ್ ಗೆ ಅವಕಾಶ ನೀಡಲಾಗಿದೆ.

ಇತ್ತ ಏಕದಿನ ಸರಣಿಗೆ ಆಯ್ಕೆಯಾಗಿದ್ದ ಪೃಥ್ವಿ ಶಾಗೆ ಟೆಸ್ಟ್ ಕ್ರಿಕೆಟ್‍ನಲ್ಲೂ ಅವಕಾಶ ನೀಡಲಾಗಿದೆ. ಯುವ ವೇಗಿ ನವದೀಪ್ ಸೈನಿ, ಶುಬ್ ಮನ್ ಗಿಲ್ ಕೂಡ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕೆಎಲ್ ರಾಹುಲ್ ಅವರಿಗೆ ಬಿಸಿಸಿಐ ಶಾಕ್ ನೀಡಿದ್ದು, ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಟೆಸ್ಟ್ ತಂಡದಲ್ಲಿ ಅವರಿಗೆ ಅವಕಾಶ ನೀಡಿಲ್ಲ. ಟೆಸ್ಟ್ ತಂಡದಲ್ಲಿ ರಿಷಬ್ ಪಂತ್ ತಮ್ಮ ಸ್ಥಾನವನ್ನು ಕಾಪಾಡಿಕೊಂಡಿದ್ದಾರೆ. ತಂಡದಲ್ಲಿ ಅನುಭವಿ ಬೌಲರ್ ಇಶಾಂತ್ ಶರ್ಮಾ ಹೆಸರು ಕೂಡ ಇದ್ದು, ಆದರೆ ಇಶಾಂತ್ ಶರ್ಮಾ ಫಿಟ್ನೆಸ್ ಪರೀಕ್ಷೆಯನ್ನು ಎದುರಿಸಬೇಕಿದೆ.

ಇತ್ತ ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಕಿಡಿಕಾರಿರುವ ಕ್ರಿಕೆಟ್ ಅಭಿಮಾನಿಗಳು, ಕೆಎಲ್ ರಾಹುಲ್ ಕೈಬಿಟ್ಟ ವಿಚಾರವಾಗಿ ಪ್ರಶ್ನಿಸಿದಾರೆ. ಕಳೆದ ವರ್ಷ ಟೆಸ್ಟ್ ತಂಡದಲ್ಲಿ ರಾಹುಲ್ ಸ್ಥಾನ ಪಡೆದಿದ್ದರು ಕಳಪೆ ಪ್ರದರ್ಶನ ನೀಡಿದ್ದರು. ಆ ವೇಳೆ ರೋಹಿತ್ ಶರ್ಮಾ ಅವರಿಗೆ ಆರಂಭಿಕ ಸ್ಥಾನ ನೀಡಲಾಗಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ರಾಹುಲ್ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು. 56 ಸರಾಸರಿಯಲ್ಲಿ 224 ರನ್ ಗಳನ್ನು ಸಿಡಿಸಿದ್ದರು. ಇದಕ್ಕೂ ಮುನ್ನ ನಡೆದ ಆಸೀಸ್ ವಿರುದ್ಧದ ಟೂರ್ನಿಯಲ್ಲೂ ರಾಹುಲ್ ಗಮನ ಸೆಳೆದಿದ್ದರು. ಆದ್ದರಿಂದ ಬಿಸಿಸಿಐ ವಿರುದ್ಧ ಅಸಮಾಧಾನ ವ್ಯಕ್ತಪಡಿದಿರುವ ಅಭಿಮಾನಿಗಳು ಟೆಸ್ಟ್ ತಂಡದಲ್ಲಿ ರಾಹುಲ್‍ರನ್ನು ಕೈಬಿಡಲು ಪ್ರಬಲ ಕಾರಣವೇನು ಎಂದು ಪ್ರಶ್ನೆ ಮಾಡಿದ್ದಾರೆ.

ಟೀಂ ಇಂಡಿಯಾ: ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ಶುಬ್‍ಮನ್ ಗಿಲ್, ಚೇತೇಶ್ವರ ಪೂಜಾರಾ, ರಹಾನೆ, ಹನುಮ ವಿಹಾರಿ, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಅಶ್ವಿನ್, ರವೀಂದ್ರ ಜಡೇಜಾ, ಬುಮ್ರಾ, ಉಮೇಶ್ ಯಾದವ್, ಮೊಹಮ್ಮದ್ ಶಮಿ, ನವದೀಪ್ ಸೈನಿ, ಇಶಾಂತ್ ಶರ್ಮಾ.

Share This Article
Leave a Comment

Leave a Reply

Your email address will not be published. Required fields are marked *