ವಾಷಿಂಗ್ಟನ್: ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ 44 ಶತಕೋಟಿ ಡಾಲರ್‌ಗೆ ಟ್ವಿಟ್ಟರ್ ಅನ್ನು ಖರೀದಿಸಿದ್ದ ಟೆಸ್ಲಾ (Tesla) ಮುಖ್ಯಸ್ಥ ಎಲೋನ್ ಮಸ್ಕ್ (Elon Musk) ಅಂತಿಮವಾಗಿ ಟ್ವಿಟರ್‌ಗೆ ಹೊಸ ಸಿಇಒ (Twitter CEO) ಅನ್ನು ನೇಮಿಸಿಕೊಂಡಿದ್ದಾರೆ. ಈ ಮಾಹಿತಿಯನ್ನು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಟ್ವಿಟರ್ ಮುನ್ನಡೆಸಲು ಮಹಿಳೆಯೊಬ್ಬರು ಬರುತ್ತಾರೆ ಎಂದು ತಿಳಿಸಿದ್ದಾರೆ.
Advertisement
ನಾನು ಟ್ವಿಟರ್‌ಗೆ ಹೊಸ ಸಿಇಒ ಅನ್ನು ನೇಮಕ ಮಾಡಿದ್ದೇನೆ ಎಂದು ತಿಳಿಸಲು ಉತ್ಸುಕನಾಗಿದ್ದೇನೆ. ಅವರು ಇನ್ನು 6 ವಾರಗಳಲ್ಲಿ ಸಿಇಒ ಸ್ಥಾನ ಅಲಂಕರಿಸಲಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಆದ್ರೆ ಆಕೆ ಯಾರು ಏನು? ಎಂಬುದನ್ನ ಅವರು ತಿಳಿಸಿಲ್ಲ. ಆದರೆ 6 ವಾರಗಳಲ್ಲಿ ಹೊಸ ಸಿಇಒ ಬರುತ್ತಾರೆ ಎಂಬ ಅಂಶ ಮಾತ್ರ ಟ್ವಿಟರ್‌ನಲ್ಲಿದೆ. ಎನ್‌ಬಿಸಿ ಯುನಿವರ್ಸಲ್‌ನ ಜಾಹೀರಾತು ವಿಭಾಗದ ಮುಖ್ಯಸ್ಥೆ ಲಿಂಡಾ ಯಾಕರಿನೊ (Linda Yaccarino) ಟ್ವಿಟರ್‌ನ ಹೊಸ ಸಿಇಒ ಆಗಲು ಮಾತುಕತೆ ನಡೆಸುತ್ತಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.
Advertisement
Advertisement
ಟ್ವಿಟ್ಟರ್‌ಗೆ ಹೊಸ ಸಿಇಒ ಬಂದ ನಂತರ ಮಸ್ಕ್ ಕಾರ್ಯನಿರ್ವಾಹಕ ಅಧ್ಯಕ್ಷ್ಯ ಹಾಗೂ ಸಿಟಿಒ (ಚೀಫ್ ಟೆಕ್ನಾಲಜಿ ಆಫೀಸರ್) ಆಗಿ ಮುಂದುವರಿಯಲಿದ್ದಾರೆ. ಭವಿಷ್ಯದಲ್ಲಿ ಸ್ಟಾಫ್‌ವೇರ್ ಹಾಗೂ ಇತರ ವ್ಯವಹಾರ ನೋಡಿಕೊಳ್ಳುವುದಾಗಿ ಮಸ್ಕ್ ಘೋಷಿಸಿದ್ದಾರೆ. ಇದನ್ನೂ ಓದಿ: ಮಲಗಿದ್ದಾಗಲೂ ಮೈಕ್ರೋಫೋನ್ ಆನ್! – ವಾಟ್ಸಪ್‌ನ ನಂಬಬೇಡಿ ಎಂದ ಮಸ್ಕ್
Advertisement
ಮಸ್ಕ್ ಅವರು ಸ್ಯಾನ್ ಫ್ರಾನ್ಸಿಸ್ಕೋ ಮೂಲದ ಟ್ವಿಟರ್‌ಗೆ ಹೊಸ ಸಿಇಒ ಹುಡುಕಲು ಯೋಜಿಸುತ್ತಿದ್ದಾರೆ ಎಂದು ಸುಮಾರು 6 ತಿಂಗಳಿನಿಂದ ಹೇಳುತ್ತಿದ್ದರು. ನಾನು ಟ್ವಿಟರ್‌ನಲ್ಲಿ ನನ್ನ ಸಮಯ ಕಡಿಮೆ ಮಾಡುತ್ತೇನೆ ಮತ್ತು ಕಾಲಾನಂತರದಲ್ಲಿ ಟ್ವಿಟರ್ ಅನ್ನು ಚಲಾಯಿಸಲು ಬೇರೆಯವರನ್ನ ಹುಡುಕುತ್ತೇನೆ ಎಂದು ಹೇಳಿದ್ದರು.
ಯಾರಾದರೂ ಮೂರ್ಖತನ ಹೊಂದಿದವರು ಟ್ವಿಟರ್ ಸಿಇಒ ಹುದ್ದೆ ವಹಿಸಿಕೊಂಡ ತಕ್ಷಣ ನಾನು ರಾಜೀನಾಮೆ ನೀಡುತ್ತೇನೆ’ ಎಂದೂ ತಿಳಿಸಿದ್ದರು. ಇದನ್ನೂ ಓದಿ: ಬೆಂಗಳೂರು ಬಳಿ ಭಾರೀ ಮೊತ್ತಕ್ಕೆ ಜಾಗ ಖರೀದಿಸಿದ ಆಪಲ್ ಐಫೋನ್ ತಯಾರಕ ಫಾಕ್ಸ್‌ಕಾನ್
Excited to announce that I’ve hired a new CEO for X/Twitter. She will be starting in ~6 weeks!
My role will transition to being exec chair & CTO, overseeing product, software & sysops.
— Elon Musk (@elonmusk) May 11, 2023
ಮಸ್ಕ್ ಟ್ವಿಟ್ಟರ್ ಸಿಇಒ ಆದ ನಂತರ ಹಲವು ಬದಲಾವಣೆಗಳನ್ನ ತಂದಿದ್ದರು. ಉದ್ಯೋಗ ಕಡಿತಗೊಳಿಸಿದ್ದಲ್ಲದೇ, ಉದ್ಯೋಗ ಸಮಯ ಹೆಚ್ಚಿಸಿದ್ದರು. ಜೊತೆಗೆ ಬ್ಲೂ ಟಿಕ್ ಪಡೆಯಲು ಹಣ ಪಾವತಿಸುವ ಕ್ರಮ ಜಾರಿಗೆ ತಂದರು. ಇದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು.