Connect with us

Latest

56 ಇಂಚಿನ ಎದೆ ಯಾವಾಗ ಉತ್ತರಿಸುತ್ತೆ: ಸುರ್ಜೇವಾಲ ಟ್ವೀಟ್‍ಗೆ ನೆಟ್ಟಿಗರು ಗರಂ

Published

on

ನವದೆಹಲಿ: ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಾವನ್ನು ಕೂಡ ರಾಜಕೀಯಕ್ಕೆ ಬಳಸಿಕೊಂಡ ಕಾಂಗ್ರೆಸ್ ವಕ್ತಾರ ರಣ್‍ದೀಪ್ ಸಿಂಗ್ ಸುರ್ಜೇವಾಲ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ.

ದೇಶಕ್ಕಾಗಿ ಪ್ರಾಣ ಬಿಟ್ಟ ವೀರ ಯೋಧರ ಸಾವಿನಲ್ಲೂ ಕಾಂಗ್ರೆಸ್ ರಾಜಕೀಯ ಮಾಡುವ ಮೂಲಕ ಅವಮಾನ ಮಾಡಿದೆ ಎಂದು ಹೇಳಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಒಟ್ಟು 18 ಬಾರಿ ಘೋರ ಉಗ್ರರ ದಾಳಿ ನಡೆದಿದೆ. ಈ ದಾಳಿಗಳಿಗೆ 56 ಇಂಚಿನ ಎದೆ ಯಾವಾಗ ಉತ್ತರಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಯುಪಿಎ ಸರ್ಕಾರದ 55 ತಿಂಗಳ ಅವಧಿಯಲ್ಲಿ ಪಾಕಿಸ್ತಾನವು 5000ಕ್ಕೂ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಇದು 1000% ಹೆಚ್ಚಳವಾಗಿದೆ. ಇದಕ್ಕೆ ಎಲ್ಲಿದೆ 56 ಇಂಚಿನ ಎದೆ. ಎಲ್ಲಿ ಹೋಯಿತು ಕೆಂಪಾದ ಕಣ್ಣು ಎಂದು ಮೋದಿಯವರಿಗೆ ಸುರ್ಜೇವಾಲಾ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಈ ದಾಳಿಯಿಂದ ಮೋದಿ ಸರ್ಕಾರ ರಾಷ್ಟ್ರೀಯ ಭದ್ರತೆಯನ್ನು ಕಾಪಾಡುವಲ್ಲಿ ವಿಫಲವಾಗಿದೆ ಎನ್ನುವುದನ್ನು ಸಾರುತ್ತದೆ. ಬಿಜೆಪಿಯು ನಾಲ್ಕು ವರ್ಷಗಳ ಕಾಲ ಜಮ್ಮು ಮತ್ತು ಕಾಶ್ಮೀರದಲ್ಲಿ ಆಡಳಿತ ನಡೆಸಿತ್ತು, ಆದರೂ ಉಗ್ರರನ್ನು ಮಾತ್ರ ಸೆದೆಬಡಿಯಲು ಆಗಲಿಲ್ಲ. ಈಗ ಅಲ್ಲಿ ರಾಜ್ಯಪಾಲರ ಮೂಲಕ ಬಿಜೆಪಿಯೇ ತನ್ನ ಅಧಿಕಾರ ಚಲಾಯಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರವನ್ನು ಈಗ ಬಿಜೆಪಿ ಆಳವಾದ ಗುಂಡಿಯಲ್ಲಿ ನೂಕಿದೆ ಎಂದು ಸುರ್ಜೇವಾಲಾ ಟ್ವೀಟ್ ಮೂಲಕ ಕಿಡಿಕಾರಿದ್ದರು. ಸುರ್ಜೇವಾಲಾ ಟ್ವೀಟ್‍ಗೆ ನೆಟ್ಟಿಗರು ರೀ-ಟ್ವೀಟ್ ಮಾಡಿ ಆಕ್ರೋಶ ಹೊರಹಾಕುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv