ಚಿಕ್ಕಬಳ್ಳಾಪುರ: ಕೆಎಸ್‌ಆರ್‌ಟಿಸಿ ಬಸ್ (KSRTC Bus) ಹರಿದು ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಆದರ್ಶ ಚಿತ್ರಮಂದಿರದ ಬಳಿ ನಡೆದಿದೆ.
ಕೊಮ್ಮಸಂದ್ರ ಗ್ರಾಮದ 40 ವರ್ಷದ ವೆಂಕಟೇಶ್ ಹಾಗೂ ಪತ್ನಿ 34 ವರ್ಷದ ಸರಸತ್ವತಮ್ಮ ಮೃತರು. ಮೃತ ಸರಸ್ವತಮ್ಮ ಸ್ವಗ್ರಾಮದ ನಾರಾಯಣಹಳ್ಳಿಯಲ್ಲಿ ಇರುಮುಡಿ ಕಾರ್ಯಕ್ರಮ ನಿಮಿತ್ತ ದಂಪತಿ ಬೈಕ್ ಮೂಲಕ ತೆರಳುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ದಂಪತಿ ಕೆಳಗೆ ಬಿದ್ದಿದ್ದಾರೆ. ಹಿಂಬದಿಯಿಂದ ಬರುತ್ತಿದ್ದ ಬಸ್ ಇಬ್ಬರ ತಲೆ ಮೇಲೆ ಹರಿದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ (Chintamani Town Police Staion) ಪ್ರಕರಣ ದಾಖಲಾಗಿದೆ.
ಬೈಕ್‌ಗೆ ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು:
ಮತ್ತೊಂದು ಪ್ರಕರಣದಲ್ಲಿ ಬೈಕ್‌ಗೆ ಕಾರು ಡಿಕ್ಕಿಯಾಗಿ (Car-Bike Accident) ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ನೆರಗನಹಳ್ಳಿ ಗೇಟ್ ಬಳಿ ನಡೆದಿದೆ. ಇದನ್ನೂ ಓದಿ: ಅದಾನಿ ತಮ್ಮ ಮೇಲಿನ ಆರೋಪ ಒಪ್ಪಿಕೊಳ್ಳಲ್ಲ, ಕೇಂದ್ರ ಸರ್ಕಾರವೇ ರಕ್ಷಿಸುತ್ತಿದೆ: ರಾಗಾ ಕಿಡಿ
50 ವರ್ಷದ ವೆಂಕಟೇಶ್, 30 ವರ್ಷದ ಮಹೇಶ್ ಮೃತರು. ಅಪಘಾತದ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ನಂಜುಂಡಯ್ಯ ಎಂಬುವವರಿಗೆ ಡಿಕ್ಕಿಯಾಗಿ ಗಾಯಗೊಂಡಿದ್ದಾರೆ. ಅಪಘಾತ ನಂತರ ಕಾರು ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಶಪ್ಪನವರ್ ಆಯ್ತು ಈಗ ಜಯ ಮೃತ್ಯುಂಜಯ ಶ್ರೀ ವಿರುದ್ಧ ಹೆಬ್ಬಾಳ್ಕರ್ ಅಸಮಾಧಾನ