– ಪ್ರಿಯಕರನೊಂದಿಗೆ ಸೇರಿ ಸಹೋದರನ ದೇಹ ಪೀಸ್ ಮಾಡಿ ಎಸೆದಿದ್ದ ಅಕ್ಕ
ಬೆಂಗಳೂರು: ಅಕ್ಕನ ಅನೈತಿಕ ಸಂಬಂಧ ವಿರೋಧಿಸಿದ್ದಕ್ಕೆ ತಮ್ಮನನ್ನೇ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ.
Advertisement
ಎಂಟು ವರ್ಷಗಳ ಹಿಂದೆ ಏರ್‌ಬ್ಯಾಗ್‌ನಲ್ಲಿ ತುಂಡರಿಸಿದ ಕೈ-ಕಾಲು ಮತ್ತು ರುಂಡವಿಲ್ಲದ ಮುಂಡಾ ಪ್ರತ್ಯೇಕ ಕಡೆ ಪತ್ತೆಯಾಗಿತ್ತು. ಮೂರು ವರ್ಷಗಳ ತನಿಖೆ ಬಳಿಕವು ಆರೋಪಿಗಳು ಪತ್ತೆಯಾಗದ ಹಿನ್ನೆಲೆ ಪೊಲೀಸರು ಪತ್ತೆಯಾಗದ ಪ್ರಕರಣ ಎಂದು ಕ್ಲೋಸ್ ಮಾಡಿದ್ದರು. ಆದರೆ ಎಂಟು ವರ್ಷಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ತನ್ನದೇ ಕತ್ತು ಸೀಳಿ, ಚಾಕು, ಗನ್ ಹಿಡ್ಕೊಂಡು ದೆಹಲಿ ಬೀದಿಯಲ್ಲಿ ಓಡಾಡಿದ ವ್ಯಕ್ತಿ – ಜನ ಚೆಲ್ಲಾಪಿಲ್ಲಿ
Advertisement
Advertisement
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತನ್ನ ಆಕ್ಕನಾದ ಭಾಗ್ಯಶ್ರೀ ಮತ್ತು ಆಕೆಯ ಪ್ರಿಯಕರ ಸುಪುತ್ರ ಶಂಕರಪ್ಪ ತಳವಾರ್‌ನಿಂದ ಕೊಲೆಯಾಗಿದ್ದ. ಆರೋಪಿಗಳಾದ ಸುಪುತ್ರ ಮತ್ತು ಭಾಗ್ಯಶ್ರೀ ಕಾಲೇಜು ದಿನಗಳಲ್ಲಿ ಪ್ರೀತಿಸುತ್ತಿದ್ದರು. ಆದರೆ ಪೋಷಕರು ಒಪ್ಪದ ಹಿನ್ನೆಲೆ ಇಬ್ಬರು ಪ್ರತ್ಯೇಕವಾಗಿ ಮದುವೆಯಾಗಿ ಜೀವನ ನಡೆಸುತ್ತಿದ್ದರು. ಈ ನಡುವೆ ಸಂಸಾರದಲ್ಲಿ ವಿರಸ ಮೂಡಿ ಸುಪುತ್ರ ಬೆಂಗಳೂರು ಸೇರಿದ್ದ. ಜೊತೆಗೆ ಭಾಗ್ಯಶ್ರೀಯನ್ನೂ ಬೆಂಗಳೂರಿಗೆ ಬರುವಂತೆ ಹೇಳಿದ್ದಾನೆ. ಗಂಡನನ್ನು ಬಿಟ್ಟ ಭಾಗ್ಯಶ್ರೀ ತಮ್ಮ ಲಿಂಗರಾಜನ ಜೊತೆ ಬೆಂಗಳೂರಿಗೆ ಬಂದಿದ್ದಳು. ಮೂರು ಜನ ಜಿಗಣಿ ಕೈಗಾರಿಕಾ ಪ್ರದೇಶದ ಯಜಾಕಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದು, ಜಿಗಣಿ ಸಮೀಪದ ವಡೇರ ಮಂಚನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಮೂರು ಮಂದಿ ವಾಸವಾಗಿದ್ದರು. ದಿನ ಕಳೆದಂತೆ ಭಾಗ್ಯಶ್ರೀ ಮತ್ತು ಸುಪತ್ರ ನಡುವಿನ ಸಲುಗೆಯು ಆಕೆಯ ಸಹೋದರ ಲಿಂಗರಾಜುಗೆ ಬೇಸರ ಮೂಡಿಸಿತ್ತು. ಅದೊಂದು ದಿನ ಸುಪುತ್ರನ ಸಂಬಂಧ ಮುರಿದುಕೊಳ್ಳುವಂತೆ ಅಕ್ಕ ಭಾಗ್ಯಶ್ರೀಗೆ ಲಿಂಗರಾಜು ತಾಕೀತು ಮಾಡಿದ್ದ. ಇದಕ್ಕೆ ಒಪ್ಪದಿದ್ದಾಗ ಕಪಾಳಕ್ಕೆ ಹೊಡೆದಿದ್ದ. ಮಧ್ಯಪ್ರವೇಶಿಸಿದ ಅಕ್ಕನ ಪ್ರಿಯಕರ ಲಿಂಗರಾಜುನನ್ನು ಪ್ರಶ್ನಿಸಿದ್ದ. ಈ ವೇಳೆ ಕೋಪಗೊಂಡ ಲಿಂಗರಾಜು ಅಕ್ಕನ ಪ್ರಿಯಕರ ಸುಪುತ್ರನ ಮೇಲೆ ಹಲ್ಲೆ ಮಾಡಿದ್ದ.
Advertisement
ಪ್ರಿಯಕರನ ಮೇಲೆ ತಮ್ಮ ಲಿಂಗರಾಜು ಹಲ್ಲೆ ಮಾಡುತ್ತಿರುವುದನ್ನು ಕಂಡು ವ್ಯಾಘ್ರಗೊಂಡ ಭಾಗ್ಯಶ್ರೀ ಮತ್ತು ಪ್ರಿಯಕರ ಸುಪುತ್ರ ಸೇರಿಕೊಂಡು ನಿಂಗರಾಜು ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ನಿತ್ರಾಣಗೊಂಡು ಲಿಂಗರಾಜು ಸ್ಥಳದಲ್ಲಿಯೇ ಮೃತಪಟ್ಟಿದ್ದ. ಕೊಲೆ ರಹಸ್ಯವಾಗಿಡಲು ಲಿಂಗರಾಜು ಕೈ-ಕಾಲು, ರುಂಡ-ಮುಂಡಾವನ್ನು ಕತ್ತರಿಸಿ ಬೇರ್ಪಡಿಸಿದ ಭಾಗ್ಯಶ್ರೀ ಮತ್ತು ಸುಪುತ್ರ ಮೂರು ಬ್ಯಾಗ್‌ಗಳಲ್ಲಿ ತುಂಬಿ ಪ್ರತ್ಯೇಕ ಕಡೆಗಳಲ್ಲಿ ಎಸೆದು ಪರಾರಿಯಾಗಿದ್ದರು. ಇದನ್ನೂ ಓದಿ: ಪೊಲೀಸರಿಗೆ ಮಾಹಿತಿ ನೀಡಿದ್ರೆ ನಿಮ್ಮ ಮನೆ ಸರ್ವನಾಶವಾಗುತ್ತೆ – ವಿಚಿತ್ರ ಡೆತ್‌ನೋಟ್ ಬರೆದು ಯುವಕ ಆತ್ಮಹತ್ಯೆ
ಜಿಗಣಿ ಟೌನ್ ವಿ ಇನ್ ಹೋಟೆಲ್ ಬಳಿ ತುಂಡರಿಸಿ ಕೈ-ಕಾಲುಗಳು ತುಂಬಿದ ಬ್ಯಾಗ್ ಪತ್ತೆಯಾದರೆ, ರುಂಡವಿಲ್ಲದ ಮುಂಡಾ ವಡೇರ ಮಂಚನಹಳ್ಳಿ ಕೆರೆಯಲ್ಲಿ ಪತ್ತೆಯಾಗಿತ್ತು. ರುಂಡ ಮಾತ್ರ ಇಲ್ಲಿಯವರೆಗೆ ಪತ್ತೆಯಾಗುವುದಿಲ್ಲ. ಆದರೆ ಸ್ಥಳೀಯರ ಮಾಹಿತಿ ಆಧರಿಸಿ ಜಿಗಣಿ ಪೊಲೀಸ್ ಠಾಣೆಯಲ್ಲಿ ಎರಡು ಕೊಲೆ ಪ್ರಕರಣಗಳು ದಾಖಲಾಗುತ್ತವೆ. ಮೂರು ವರ್ಷ ಕಳೆದರೂ ಪ್ರಕರಣ ಬೇಧಿಸಲು ಸಾಧ್ಯವಾಗದೇ ಪತ್ತೆಯಾಗದ ಪ್ರಕರಣ ಎಂದು ನ್ಯಾಯಾಲಯಕ್ಕೆ 2018ರಲ್ಲಿ ಜಿಗಣಿ ಪೊಲೀಸರು ಸಿ ರಿಪೋರ್ಟ್ ಸಲ್ಲಿಸಿದ್ದರು. ಇತ್ತೀಚೆಗೆ ಕೇಂದ್ರ ವಲಯ ಐಜಿ ರವಿಕಾಂತೇ ಗೌಡರು ಕ್ರೈಮ್ ರಿವೀವ್ ಸಭೆ ವೇಳೆ 2015 ಕೊಲೆ ಪ್ರಕರಣ ತಾರ್ಕಿಕ ಅಂತ್ಯ ಕಾಣಿಸುವಂತೆ ಜಿಗಣಿ ಪೊಲೀಸರಿಗೆ ಸೂಚಿಸಿದ್ದರು. ಪ್ರಕರಣದ ಮರುತನಿಖೆಗೆ ಇಳಿದ ಜಿಗಣಿ ಪೊಲೀಸರಿಗೆ ಆರೋಪಿಗಳ ಸುಳಿವು ಅಷ್ಟು ಸುಲಭವಾಗಿ ದೊರೆಯುವುದಿಲ್ಲ. ಕೊನೆಗೆ ಮೂರು ತಿಂಗಳ ನಿರಂತರ ಪರಿಶ್ರಮದ ಫಲವಾಗಿ ಅದೊಂದು ದಿನ ಬಾತ್ಮೀದಾರರಿಂದ ಮಾಹಿತಿ ಲಭ್ಯವಾಗುತ್ತದೆ. ಮಹಾರಾಷ್ಟ್ರದ ನಾಸಿಕ್‌ನಲ್ಲಿ ಸುಪುತ್ರ ಮತ್ತು ಭಾಗ್ಯಶ್ರೀ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ದೊರೆಯುತ್ತದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ತಲಾಷೆಗಿಳಿದಾಗ ಆರೋಪಿ ಭಾಗ್ಯಶ್ರೀ, ಪ್ರಿಯಾಂಕಾ ವಿನೋದ್ ರೆಡ್ಡಿ ಎಂದು ಹೆಸರು ಬದಲಿಸಿಕೊಂಡು ನಾಸಿಕ್ ನಗರದಲ್ಲಿ ಸುಪುತ್ರನ ಜೊತೆ ವಾಸವಾಗಿರುವುದು ಪತ್ತೆಯಾಗುತ್ತದೆ. ಅಂತಿಮವಾಗಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಲಿಂಗರಾಜು ಕೊಲೆ ವೃತ್ತಾಂತ ಬಯಲಾಗಿದೆ.
ಲಿಂಗರಾಜು ಕೊಲೆ ಬಳಿಕ ಸ್ವಗ್ರಾಮಕ್ಕೂ ತೆರಳದ ಆರೋಪಿಗಳು ಯಾರೊಬ್ಬರ ಸಂಪರ್ಕಕ್ಕೂ ಬಾರದೆ, ಮೊಬೈಲ್ ಪೋನ್ ಸಹ ಬಳಸದೇ ತಲೆ ಮರೆಸಿಕೊಂಡಿದ್ದರು. ಟೆಕ್ನಿಕಲ್ ಎವಿಡೆನ್ಸ್ ಮತ್ತು ಭಾತ್ಮೀದಾರರ ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸುವಲ್ಲಿ ಜಿಗಣಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸುದರ್ಶನ್ ಮತ್ತು ತಂಡ ಯಶಸ್ವಿಯಾಗಿದ್ದು, ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ವಿಶೇಷ ಬಹುಮಾನ ಘೋಷಿಸಿದ್ದಾರೆ. ಇದನ್ನೂ ಓದಿ: ವ್ಹೀಲಿಂಗ್ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ