ರಾಯಚೂರು: ಹೋಟೆಲ್‌ನಲ್ಲಿ ಬಿರಿಯಾನಿ ತಿಂದು ನಕಲಿ 500 ರೂ. ನೋಟು ಚಲಾವಣೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
500 ರೂ. ಮುಖಬೆಲೆಯ ನಕಲಿ ನೋಟು ಚಲಾವಣೆಗೆ ಮುಂದಾಗಿದ್ದ ಮಂಜುನಾಥ ಹಾಗೂ ರಮೇಶ್ ಬಂಧಿತ ಆರೋಪಿಗಳು. ಇದನ್ನೂ ಓದಿ: ನಡು ರಸ್ತೆಯಲ್ಲಿ ಅಡ್ಡಗಟ್ಟಿ ರೌಡಿಶೀಟರ್ ಬರ್ಬರ ಹತ್ಯೆ
ಆರೋಪಿಗಳು ರಾಯಚೂರು (Raichur) ನಗರದ ಬಿರಿಯಾನಿ ಹೋಟೆಲ್‌ನಲ್ಲಿ ಚಿಕನ್ ಬಿರಿಯಾನಿ ತಿಂದು 500 ರೂ. ಬಿಲ್ ಪಾವತಿಸಿದ್ದರು. ಸ್ವಲ್ಪ ಹೊತ್ತಿನ ಬಳಿಕ ಅನುಮಾನ ಬಂದು ಹೋಟೆಲ್ ಮಾಲೀಕ ನೋಟು ಪರಿಶೀಲಿಸಿದಾಗ ಅಸಲಿಯತ್ತು ಬಯಲಾಗಿದೆ. ಇದನ್ನೂ ಓದಿ: ಛತ್ರಿಗಳು ಎಂದ ಡಿಕೆಶಿ ವಿರುದ್ಧ ಸಿಡಿದೆದ್ದ ಮಂಡ್ಯದ ಜನ!
ಮನೋರಂಜನೆಗಾಗಿ ಬಳಸುವ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಎಂದು ನಮೂದಿಸಿದ್ದ ನಕಲಿ ನೋಟನ್ನ ಆರೋಪಿಗಳು ಬಿಲ್ ಪಾವತಿಗೆ ಬಳಸಿದ್ದರು. ಹೋಟೆಲ್ ಮಾಲೀಕ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇಬ್ಬರು ಆರೋಪಿಗಳನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಬೆಳೆ ಹಾಳು ಮಾಡಿದ್ದಕ್ಕೆ ದಾಯಾದಿಗಳ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ
ಖೋಟಾ ನೋಟು ಜಾಲ ಪತ್ತೆ ಬೆನ್ನಲ್ಲೆ ಮತ್ತೊಂದು ಪ್ರಕರಣ ದಾಖಲಾಗಿದೆ. ನಕಲಿ ನೋಟು ದಂಧೆಗೆ ಮುಂದಾಗಿದ್ದ ನಾಲ್ವರನ್ನ ಪೊಲೀಸರು ಇತ್ತೀಚಿಗಷ್ಟೆ ಬಂಧಿಸಿದ್ದರು. ಜಿಲ್ಲೆಯಲ್ಲಿ ಖೋಟಾ ನೋಟು ಹಾವಳಿ ಹೆಚ್ಚಾಗಿರುವುದು ಪೊಲೀಸರಿಗೆ ತಲೆನೋವಾಗಿದೆ.